ವಿಮೋಚನಕಾಂಡ 35 : 1 (OCVKN)
ಸಬ್ಬತ್ ದಿನದ ನಿಯಮಗಳು ಮೋಶೆಯು ಇಸ್ರಾಯೇಲರ ಸಮೂಹವನ್ನು ಒಟ್ಟುಗೂಡಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವ ದೇವರು ನಿಮಗೆ ಹೀಗೆ ಆಜ್ಞಾಪಿಸಿದ್ದಾರೆ.
ವಿಮೋಚನಕಾಂಡ 35 : 2 (OCVKN)
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧವಾಗಿರಬೇಕು. ಅದು ಯೆಹೋವ ದೇವರ ಸಬ್ಬತ್ ದಿನ. ಆ ದಿನದಲ್ಲಿ ಕೆಲಸಮಾಡುವವರಿಗೆ ಮರಣದಂಡನೆಯಾಗಬೇಕು.
ವಿಮೋಚನಕಾಂಡ 35 : 3 (OCVKN)
ಸಬ್ಬತ್ ದಿನದಲ್ಲಿ ನೀವು ವಾಸಮಾಡುವ ಯಾವ ಮನೆಯಲ್ಲಿಯೂ ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.
ವಿಮೋಚನಕಾಂಡ 35 : 4 (OCVKN)
ದೇವದರ್ಶನದ ಗುಡಾರಕ್ಕೆ ಬೇಕಾದ ವಸ್ತುಗಳು ಮೋಶೆಯು ಇಸ್ರಾಯೇಲರ ಇಡೀ ಸಮೂಹಕ್ಕೆ ಹೇಳಿದ್ದು: “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ.
ವಿಮೋಚನಕಾಂಡ 35 : 5 (OCVKN)
ನಿಮ್ಮಲ್ಲಿರುವದರಿಂದ ಯೆಹೋವ ದೇವರಿಗೆ ಕಾಣಿಕೆಯನ್ನು ಅರ್ಪಿಸಿರಿ. ಯಾರ‍್ಯಾರಿಗೆ ಇಷ್ಟವಿದೆಯೋ ಅವರು, “ಚಿನ್ನ, ಬೆಳ್ಳಿ, ಕಂಚು,
ವಿಮೋಚನಕಾಂಡ 35 : 6 (OCVKN)
ನೀಲಿ, ನಾರು, ರಕ್ತವರ್ಣ ನಾರು, ಲಾಕಿ ಬಣ್ಣ, ನಾರು, ನಾರುಬಟ್ಟೆಗಳು, ಮೇಕೆಯ ಕೂದಲು,
ವಿಮೋಚನಕಾಂಡ 35 : 7 (OCVKN)
ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ,
ವಿಮೋಚನಕಾಂಡ 35 : 8 (OCVKN)
ದೀಪಕ್ಕಾಗಿ ಓಲಿವ್ ಎಣ್ಣೆ ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಮತ್ತು ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು,
ವಿಮೋಚನಕಾಂಡ 35 : 9 (OCVKN)
ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳನ್ನು ತನ್ನಿರಿ.
ವಿಮೋಚನಕಾಂಡ 35 : 10 (OCVKN)
“ನಿಮ್ಮಲ್ಲಿರುವ ಶಿಲ್ಪಿಗಳೆಲ್ಲರೂ ಬಂದು, ಯೆಹೋವ ದೇವರು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅವು ಯಾವುವೆಂದರೆ:
ವಿಮೋಚನಕಾಂಡ 35 : 11 (OCVKN)
“ದೇವದರ್ಶನದ ಗುಡಾರವನ್ನು, ಅದರ ಮೇಲ್ಹೊದಿಕೆಯನ್ನು, ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,
ವಿಮೋಚನಕಾಂಡ 35 : 12 (OCVKN)
ಮಂಜೂಷವನ್ನು, ಅದರ ಕೋಲುಗಳನ್ನು, ಅವುಗಳೊಂದಿಗೆ ಕರುಣಾಸನವನ್ನು, ಮರೆಮಾಡುವ ಪರದೆಯನ್ನು,
ವಿಮೋಚನಕಾಂಡ 35 : 13 (OCVKN)
ಮೇಜನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,
ವಿಮೋಚನಕಾಂಡ 35 : 14 (OCVKN)
ಬೆಳಕಿಗಾಗಿ ದೀಪಸ್ತಂಭವನ್ನು, ಅದರ ಉಪಕರಣಗಳನ್ನು, ಅದರ ದೀಪಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,
ವಿಮೋಚನಕಾಂಡ 35 : 15 (OCVKN)
ಧೂಪವೇದಿಯನ್ನು, ಅದರ ಕೋಲುಗಳನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,
ವಿಮೋಚನಕಾಂಡ 35 : 16 (OCVKN)
ದಹನಬಲಿಯ ಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು,
ವಿಮೋಚನಕಾಂಡ 35 : 17 (OCVKN)
ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು,
ವಿಮೋಚನಕಾಂಡ 35 : 18 (OCVKN)
ಗುಡಾರದ ಗೂಟಗಳನ್ನು, ಅಂಗಳದ ಗೂಟಗಳನ್ನು, ಅದರ ಹಗ್ಗಗಳನ್ನು,
ವಿಮೋಚನಕಾಂಡ 35 : 19 (OCVKN)
ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ಮಾಡಲಿ,” ಎಂದನು.
ವಿಮೋಚನಕಾಂಡ 35 : 20 (OCVKN)
ಆಗ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಯ ಸನ್ನಿಧಿಯಿಂದ ಹೊರಟು ಹೋದರು.
ವಿಮೋಚನಕಾಂಡ 35 : 21 (OCVKN)
ಹೃದಯ ಪ್ರೇರಣೆ ಹೊಂದಿದವರೂ ಸಿದ್ಧಮನಸ್ಸಿನವರೂ ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
ವಿಮೋಚನಕಾಂಡ 35 : 22 (OCVKN)
ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.
ವಿಮೋಚನಕಾಂಡ 35 : 23 (OCVKN)
ನೀಲಿ, ಧೂಮ್ರ, ರಕ್ತವರ್ಣ ದಾರಗಳೂ ನಯವಾದ ನಾರುಮಡಿ, ಮೇಕೆಯ ಕೂದಲು, ಟಗರುಗಳ ಕೆಂಪು ಬಣ್ಣದ ಚರ್ಮಗಳೂ ಕಡಲುಹಂದಿಯ ಚರ್ಮಗಳೂ ಯಾರ ಬಳಿಯಲ್ಲಿದ್ದವೋ ಅವರೆಲ್ಲರೂ ತಂದರು.
ವಿಮೋಚನಕಾಂಡ 35 : 24 (OCVKN)
ಬೆಳ್ಳಿ, ಕಂಚುಗಳ ಕಾಣಿಕೆಗಳನ್ನು ಅರ್ಪಿಸುವುದಕ್ಕೆ ಮನಸ್ಸಿದ್ದವರೆಲ್ಲರೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸಕ್ಕೋಸ್ಕರ ಜಾಲಿ ಮರವಿದ್ದವರು ಅದನ್ನು ತಂದರು.
ವಿಮೋಚನಕಾಂಡ 35 : 25 (OCVKN)
ಕುಶಲತೆ ಬಲ್ಲ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ದಾರಗಳನ್ನು ಮತ್ತು ನಯವಾದ ನಾರುಮಡಿಯನ್ನು ತಂದರು.
ವಿಮೋಚನಕಾಂಡ 35 : 26 (OCVKN)
ಕುಶಲತೆ ಬಲ್ಲ ಎಲ್ಲಾ ಸ್ತ್ರೀಯರು ಮೇಕೆ ಕೂದಲುಗಳನ್ನು ನೇಯ್ದರು.
ವಿಮೋಚನಕಾಂಡ 35 : 27 (OCVKN)
ಅಧಿಪತಿಗಳು ಏಫೋದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವುದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ
ವಿಮೋಚನಕಾಂಡ 35 : 28 (OCVKN)
ಸುಗಂಧದ್ರವ್ಯಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆಯನ್ನೂ ತಂದರು.
ವಿಮೋಚನಕಾಂಡ 35 : 29 (OCVKN)
ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.
ವಿಮೋಚನಕಾಂಡ 35 : 30 (OCVKN)
ಬೆಚಲಯೇಲ್ ಮತ್ತು ಒಹೋಲಿಯಾಬನು ಆಗ ಮೋಶೆಯು ಇಸ್ರಾಯೇಲರಿಗೆ, “ನೋಡಿರಿ, ಯೆಹೋವ ದೇವರು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ಆರಿಸಿಕೊಂಡಿದ್ದಾರೆ,
ವಿಮೋಚನಕಾಂಡ 35 : 31 (OCVKN)
ಅವರು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ
ವಿಮೋಚನಕಾಂಡ 35 : 32 (OCVKN)
ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದರಲ್ಲಿಯೂ
ವಿಮೋಚನಕಾಂಡ 35 : 33 (OCVKN)
ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸದ ಜ್ಞಾನದಿಂದಲೂ ಅವನನ್ನು ತುಂಬಿಸಿದ್ದಾರೆ.
ವಿಮೋಚನಕಾಂಡ 35 : 34 (OCVKN)
ಇದಲ್ಲದೆ ಕಲಿಸುವುದಕ್ಕೆ ಅವನಿಗೆ ಮತ್ತು ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದಾರೆ.
ವಿಮೋಚನಕಾಂಡ 35 : 35 (OCVKN)
ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35