ವಿಮೋಚನಕಾಂಡ 37 : 1 (OCVKN)
ಶಾಸನಗಳ ಮಂಜೂಷವು ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ* ಸುಮಾರು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಮಂಜೂಷವನ್ನು ಮಾಡಿದನು.
ವಿಮೋಚನಕಾಂಡ 37 : 2 (OCVKN)
ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ, ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿದನು.
ವಿಮೋಚನಕಾಂಡ 37 : 3 (OCVKN)
ಅದರ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇರಿಸಿದನು.
ವಿಮೋಚನಕಾಂಡ 37 : 4 (OCVKN)
ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.
ವಿಮೋಚನಕಾಂಡ 37 : 5 (OCVKN)
ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು.
ವಿಮೋಚನಕಾಂಡ 37 : 6 (OCVKN)
ಇದಲ್ಲದೆ ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಿದನು.
ವಿಮೋಚನಕಾಂಡ 37 : 7 (OCVKN)
ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿದನು.
ವಿಮೋಚನಕಾಂಡ 37 : 8 (OCVKN)
ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿದನು.
ವಿಮೋಚನಕಾಂಡ 37 : 9 (OCVKN)
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು.
ವಿಮೋಚನಕಾಂಡ 37 : 10 (OCVKN)
ಮೇಜು ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಿದನು.
ವಿಮೋಚನಕಾಂಡ 37 : 11 (OCVKN)
ಆಮೇಲೆ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಸುತ್ತಲೂ ಬಂಗಾರದ ತೋರಣ ಕಟ್ಟಿದನು.
ವಿಮೋಚನಕಾಂಡ 37 : 12 (OCVKN)
ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಕಟ್ಟಿದರು.
ವಿಮೋಚನಕಾಂಡ 37 : 13 (OCVKN)
ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಎರಕ ಹೊಯ್ದು, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಿದರು.
ವಿಮೋಚನಕಾಂಡ 37 : 14 (OCVKN)
ಮೇಜನ್ನು ಹೊತ್ತುಕೊಂಡು ಹೋಗಲು ಕೋಲುಗಳನ್ನು ಮಾಡಿ, ಈ ಬಳೆಗಳನ್ನು ಅಡ್ಡಪಟ್ಟಿಗೆ ಸಮೀಪದಲ್ಲಿ ಕೂಡಿಸಿದರು.
ವಿಮೋಚನಕಾಂಡ 37 : 15 (OCVKN)
ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳಿಗೆ ಬಂಗಾರದಿಂದ ಹೊದಿಸಲಾಯಿತು.
ವಿಮೋಚನಕಾಂಡ 37 : 16 (OCVKN)
ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣ, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯಗಳ ಅರ್ಪಣೆಗಾಗಿ ಬೇಕಾಗುವ ಬಟ್ಟಲುಗಳನ್ನು ಶುದ್ಧ ಬಂಗಾರದಿಂದ ಮಾಡಿದರು.
ವಿಮೋಚನಕಾಂಡ 37 : 17 (OCVKN)
ದೀಪಸ್ತಂಭವು ಚೊಕ್ಕ ಬಂಗಾರದಿಂದ ದೀಪಸ್ತಂಭವನ್ನು ಮಾಡಿದರು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದರು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇದ್ದವು.
ವಿಮೋಚನಕಾಂಡ 37 : 18 (OCVKN)
ಆ ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬಂದಿದ್ದವು.
ವಿಮೋಚನಕಾಂಡ 37 : 19 (OCVKN)
ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿದ್ದವು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು ಮೊಗ್ಗು ಪುಷ್ಟಗಳಿದ್ದವು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇದ್ದವು.
ವಿಮೋಚನಕಾಂಡ 37 : 20 (OCVKN)
ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇದ್ದವು.
ವಿಮೋಚನಕಾಂಡ 37 : 21 (OCVKN)
ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿತ್ತು, ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳಿದ್ದವು.
ವಿಮೋಚನಕಾಂಡ 37 : 22 (OCVKN)
ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿದ್ದವು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿತ್ತು.
ವಿಮೋಚನಕಾಂಡ 37 : 23 (OCVKN)
ಅವರು ಏಳು ದೀಪಗಳನ್ನೂ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಿದರು.
ವಿಮೋಚನಕಾಂಡ 37 : 24 (OCVKN)
ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಿದರು.
ವಿಮೋಚನಕಾಂಡ 37 : 25 (OCVKN)
ಧೂಪವೇದಿ ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು.
ವಿಮೋಚನಕಾಂಡ 37 : 26 (OCVKN)
ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿದರು. ಅದರ ಸುತ್ತಲೂ ಬಂಗಾರದ ಗೋಟನ್ನು ಕಟ್ಟಿಸಿದರು.
ವಿಮೋಚನಕಾಂಡ 37 : 27 (OCVKN)
ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಿದರು, ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಿದರು.
ವಿಮೋಚನಕಾಂಡ 37 : 28 (OCVKN)
ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಿದರು.
ವಿಮೋಚನಕಾಂಡ 37 : 29 (OCVKN)
ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29