ಯೆಹೆಜ್ಕೇಲನು 17 : 1 (OCVKN)
ಎರಡು ಹದ್ದುಗಳು ಮತ್ತು ದ್ರಾಕ್ಷಿಗಿಡ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 17 : 2 (OCVKN)
“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.
ಯೆಹೆಜ್ಕೇಲನು 17 : 3 (OCVKN)
ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,
ಯೆಹೆಜ್ಕೇಲನು 17 : 4 (OCVKN)
ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
ಯೆಹೆಜ್ಕೇಲನು 17 : 5 (OCVKN)
“ ‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.
ಯೆಹೆಜ್ಕೇಲನು 17 : 6 (OCVKN)
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.
ಯೆಹೆಜ್ಕೇಲನು 17 : 7 (OCVKN)
“ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.
ಯೆಹೆಜ್ಕೇಲನು 17 : 8 (OCVKN)
ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’
ಯೆಹೆಜ್ಕೇಲನು 17 : 9 (OCVKN)
“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.
ಯೆಹೆಜ್ಕೇಲನು 17 : 10 (OCVKN)
ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”
ಯೆಹೆಜ್ಕೇಲನು 17 : 11 (OCVKN)
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 17 : 12 (OCVKN)
“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.
ಯೆಹೆಜ್ಕೇಲನು 17 : 13 (OCVKN)
ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
ಯೆಹೆಜ್ಕೇಲನು 17 : 14 (OCVKN)
ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.
ಯೆಹೆಜ್ಕೇಲನು 17 : 15 (OCVKN)
ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?
ಯೆಹೆಜ್ಕೇಲನು 17 : 16 (OCVKN)
“ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ಯೆಹೆಜ್ಕೇಲನು 17 : 17 (OCVKN)
ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.
ಯೆಹೆಜ್ಕೇಲನು 17 : 18 (OCVKN)
ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.
ಯೆಹೆಜ್ಕೇಲನು 17 : 19 (OCVKN)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.
ಯೆಹೆಜ್ಕೇಲನು 17 : 20 (OCVKN)
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.
ಯೆಹೆಜ್ಕೇಲನು 17 : 21 (OCVKN)
ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.
ಯೆಹೆಜ್ಕೇಲನು 17 : 22 (OCVKN)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.
ಯೆಹೆಜ್ಕೇಲನು 17 : 23 (OCVKN)
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.
ಯೆಹೆಜ್ಕೇಲನು 17 : 24 (OCVKN)
ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24