ಯೆಹೆಜ್ಕೇಲನು 2 : 1 (OCVKN)
ಪ್ರವಾದಿಯಾಗಲು ಯೆಹೆಜ್ಕೇಲನಿಗೆ ಕರೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”
ಯೆಹೆಜ್ಕೇಲನು 2 : 2 (OCVKN)
ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.
ಯೆಹೆಜ್ಕೇಲನು 2 : 3 (OCVKN)
ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.
ಯೆಹೆಜ್ಕೇಲನು 2 : 4 (OCVKN)
ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.
ಯೆಹೆಜ್ಕೇಲನು 2 : 5 (OCVKN)
ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.
ಯೆಹೆಜ್ಕೇಲನು 2 : 6 (OCVKN)
ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.
ಯೆಹೆಜ್ಕೇಲನು 2 : 7 (OCVKN)
ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.
ಯೆಹೆಜ್ಕೇಲನು 2 : 8 (OCVKN)
ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.
ಯೆಹೆಜ್ಕೇಲನು 2 : 9 (OCVKN)
ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.
ಯೆಹೆಜ್ಕೇಲನು 2 : 10 (OCVKN)
ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.
❮
❯