ಯೆಹೆಜ್ಕೇಲನು 21 : 1 (OCVKN)
ಬಾಬಿಲೋನಿನ, ಯೆಹೋವ ದೇವರ ಖಡ್ಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 21 : 2 (OCVKN)
“ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,
ಯೆಹೆಜ್ಕೇಲನು 21 : 3 (OCVKN)
‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.
ಯೆಹೆಜ್ಕೇಲನು 21 : 4 (OCVKN)
ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.
ಯೆಹೆಜ್ಕೇಲನು 21 : 5 (OCVKN)
ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’
ಯೆಹೆಜ್ಕೇಲನು 21 : 6 (OCVKN)
“ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.
ಯೆಹೆಜ್ಕೇಲನು 21 : 7 (OCVKN)
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
ಯೆಹೆಜ್ಕೇಲನು 21 : 8 (OCVKN)
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 21 : 9 (OCVKN)
“ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “ ‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ.
ಯೆಹೆಜ್ಕೇಲನು 21 : 10 (OCVKN)
ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ.
ಯೆಹೆಜ್ಕೇಲನು 21 : 11 (OCVKN)
“ ‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ. “ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.
ಯೆಹೆಜ್ಕೇಲನು 21 : 12 (OCVKN)
ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.
ಯೆಹೆಜ್ಕೇಲನು 21 : 13 (OCVKN)
ಯೆಹೆಜ್ಕೇಲನು 21 : 14 (OCVKN)
“ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ “ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.
ಯೆಹೆಜ್ಕೇಲನು 21 : 15 (OCVKN)
ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.
ಯೆಹೆಜ್ಕೇಲನು 21 : 16 (OCVKN)
ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.
ಯೆಹೆಜ್ಕೇಲನು 21 : 17 (OCVKN)
ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”
ಯೆಹೆಜ್ಕೇಲನು 21 : 18 (OCVKN)
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
ಯೆಹೆಜ್ಕೇಲನು 21 : 19 (OCVKN)
“ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
ಯೆಹೆಜ್ಕೇಲನು 21 : 20 (OCVKN)
ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
ಯೆಹೆಜ್ಕೇಲನು 21 : 21 (OCVKN)
ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.
ಯೆಹೆಜ್ಕೇಲನು 21 : 22 (OCVKN)
ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.
ಯೆಹೆಜ್ಕೇಲನು 21 : 23 (OCVKN)
ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.
ಯೆಹೆಜ್ಕೇಲನು 21 : 24 (OCVKN)
ಯೆಹೆಜ್ಕೇಲನು 21 : 25 (OCVKN)
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ. “ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
ಯೆಹೆಜ್ಕೇಲನು 21 : 26 (OCVKN)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.
ಯೆಹೆಜ್ಕೇಲನು 21 : 27 (OCVKN)
ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’
ಯೆಹೆಜ್ಕೇಲನು 21 : 28 (OCVKN)
“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.
ಯೆಹೆಜ್ಕೇಲನು 21 : 29 (OCVKN)
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
ಯೆಹೆಜ್ಕೇಲನು 21 : 30 (OCVKN)
“ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.
ಯೆಹೆಜ್ಕೇಲನು 21 : 31 (OCVKN)
ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.
ಯೆಹೆಜ್ಕೇಲನು 21 : 32 (OCVKN)
ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’ ”
❮
❯