ಯೆಹೆಜ್ಕೇಲನು 25 : 1 (OCVKN)
ಅಮ್ಮೋನನ ವಿಷಯವಾದ ಪ್ರವಾದನೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 25 : 2 (OCVKN)
“ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.
ಯೆಹೆಜ್ಕೇಲನು 25 : 3 (OCVKN)
ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ
ಯೆಹೆಜ್ಕೇಲನು 25 : 4 (OCVKN)
ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು.
ಯೆಹೆಜ್ಕೇಲನು 25 : 5 (OCVKN)
ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.
ಯೆಹೆಜ್ಕೇಲನು 25 : 6 (OCVKN)
ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,
ಯೆಹೆಜ್ಕೇಲನು 25 : 7 (OCVKN)
ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ”
ಯೆಹೆಜ್ಕೇಲನು 25 : 8 (OCVKN)
ಮೋವಾಬಿನ ವಿರುದ್ಧ ಪ್ರವಾದನೆ “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.
ಯೆಹೆಜ್ಕೇಲನು 25 : 9 (OCVKN)
ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
ಯೆಹೆಜ್ಕೇಲನು 25 : 10 (OCVKN)
ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು.
ಯೆಹೆಜ್ಕೇಲನು 25 : 11 (OCVKN)
ಮೋವಾಬ್ಯರಿಗೆ ನಾನು ಶಿಕ್ಷೆಯನ್ನು ವಿಧಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”
ಯೆಹೆಜ್ಕೇಲನು 25 : 12 (OCVKN)
ಎದೋಮಿಗೆ ವಿರೋಧವಾದ ಪ್ರವಾದನೆ “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.
ಯೆಹೆಜ್ಕೇಲನು 25 : 13 (OCVKN)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.
ಯೆಹೆಜ್ಕೇಲನು 25 : 14 (OCVKN)
ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”
ಯೆಹೆಜ್ಕೇಲನು 25 : 15 (OCVKN)
ಫಿಲಿಷ್ಟಿಯಕ್ಕೆ ವಿರೋಧವಾದ ಪ್ರವಾದನೆ “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.
ಯೆಹೆಜ್ಕೇಲನು 25 : 16 (OCVKN)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.
ಯೆಹೆಜ್ಕೇಲನು 25 : 17 (OCVKN)
ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

1 2 3 4 5 6 7 8 9 10 11 12 13 14 15 16 17