ಯೆಹೆಜ್ಕೇಲನು 28 : 1 (OCVKN)
ಟೈರ್ ಊರಿನ ಅರಸನ ವಿರೋಧ ಪ್ರವಾದನೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
ಯೆಹೆಜ್ಕೇಲನು 28 : 2 (OCVKN)
“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.
ಯೆಹೆಜ್ಕೇಲನು 28 : 3 (OCVKN)
ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.
ಯೆಹೆಜ್ಕೇಲನು 28 : 4 (OCVKN)
ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
ಯೆಹೆಜ್ಕೇಲನು 28 : 5 (OCVKN)
ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.
ಯೆಹೆಜ್ಕೇಲನು 28 : 6 (OCVKN)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ದೇವರಂತೆ ಬುದ್ಧಿವಂತನು ಎಂದು ಭಾವಿಸಿಕೊಂಡಿರುವೆ;
ಯೆಹೆಜ್ಕೇಲನು 28 : 7 (OCVKN)
ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.
ಯೆಹೆಜ್ಕೇಲನು 28 : 8 (OCVKN)
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.
ಯೆಹೆಜ್ಕೇಲನು 28 : 9 (OCVKN)
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;
ಯೆಹೆಜ್ಕೇಲನು 28 : 10 (OCVKN)
ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”
ಯೆಹೆಜ್ಕೇಲನು 28 : 11 (OCVKN)
ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು,
ಯೆಹೆಜ್ಕೇಲನು 28 : 12 (OCVKN)
“ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
ಯೆಹೆಜ್ಕೇಲನು 28 : 13 (OCVKN)
ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ಯೆಹೆಜ್ಕೇಲನು 28 : 14 (OCVKN)
ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.
ಯೆಹೆಜ್ಕೇಲನು 28 : 15 (OCVKN)
ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
ಯೆಹೆಜ್ಕೇಲನು 28 : 16 (OCVKN)
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
ಯೆಹೆಜ್ಕೇಲನು 28 : 17 (OCVKN)
ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.
ಯೆಹೆಜ್ಕೇಲನು 28 : 18 (OCVKN)
ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.
ಯೆಹೆಜ್ಕೇಲನು 28 : 19 (OCVKN)
ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’ ”
ಯೆಹೆಜ್ಕೇಲನು 28 : 20 (OCVKN)
ಸೀದೋನಿನ ವಿಷಯವಾದ ಪ್ರವಾದನೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 28 : 21 (OCVKN)
“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
ಯೆಹೆಜ್ಕೇಲನು 28 : 22 (OCVKN)
ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.
ಯೆಹೆಜ್ಕೇಲನು 28 : 23 (OCVKN)
ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.
ಯೆಹೆಜ್ಕೇಲನು 28 : 24 (OCVKN)
ಯೆಹೆಜ್ಕೇಲನು 28 : 25 (OCVKN)
“ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು. “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.
ಯೆಹೆಜ್ಕೇಲನು 28 : 26 (OCVKN)
ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26