ಯೆಹೆಜ್ಕೇಲನು 30 : 1 (OCVKN)
ಈಜಿಪ್ಟ್ ಬಗ್ಗೆ ಪ್ರಲಾಪನೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 30 : 2 (OCVKN)
“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ “ಅಯ್ಯೋ ಆ ದಿನ!” ಎಂದು, ಅಳುತ್ತಾ ಹೇಳಿರಿ.
ಯೆಹೆಜ್ಕೇಲನು 30 : 3 (OCVKN)
ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.
ಯೆಹೆಜ್ಕೇಲನು 30 : 4 (OCVKN)
ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು.
ಯೆಹೆಜ್ಕೇಲನು 30 : 5 (OCVKN)
5 ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.
ಯೆಹೆಜ್ಕೇಲನು 30 : 6 (OCVKN)
“ ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಸಹಾಯಕರು ಬೀಳುವರು. ಅದರ ಶಕ್ತಿಯ ಮದವು ಇಳಿದುಹೋಗುವುದು. ಅಲ್ಲಿಯ ಜನರು ಮಿಗ್ದೋಲಿನಿಂದ ಸೆವೇನೆಯ ಗೋಪುರದವರೆಗೆ ಖಡ್ಗದಿಂದ ಹತರಾಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ಯೆಹೆಜ್ಕೇಲನು 30 : 7 (OCVKN)
ಆಗ ಅವರು ಹಾಳಾಗಿರುವ ದೇಶಗಳೊಳಗೆ ತಾವೂ ಹಾಳಾಗುವರು. ಹಾಳಾದ ಪಟ್ಟಣಗಳ ಮಧ್ಯದಲ್ಲಿ ಅದರ ಪಟ್ಟಣಗಳು ಹಾಳಾಗಿ ಇರುವುವು.
ಯೆಹೆಜ್ಕೇಲನು 30 : 8 (OCVKN)
ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.
ಯೆಹೆಜ್ಕೇಲನು 30 : 9 (OCVKN)
“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.
ಯೆಹೆಜ್ಕೇಲನು 30 : 10 (OCVKN)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ : “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.
ಯೆಹೆಜ್ಕೇಲನು 30 : 11 (OCVKN)
ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
ಯೆಹೆಜ್ಕೇಲನು 30 : 12 (OCVKN)
ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.
ಯೆಹೆಜ್ಕೇಲನು 30 : 13 (OCVKN)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ* ನೋಫಿನ ಇನ್ನೊಂದು ಹೆಸರು ಮೆಂಫೀಸ್ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.
ಯೆಹೆಜ್ಕೇಲನು 30 : 14 (OCVKN)
ನಾನು ಪತ್ರೋಸನ್ನು† ಪತ್ರೋಸ ಅಂದರೆ ದಕ್ಷಿಣ ಈಜಿಪ್ಟ ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.
ಯೆಹೆಜ್ಕೇಲನು 30 : 15 (OCVKN)
ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ ಪೆಲೂಸಿಯಮ್ ಪಟ್ಟಣದ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕಡಿದುಬಿಡುವೆನು.
ಯೆಹೆಜ್ಕೇಲನು 30 : 16 (OCVKN)
ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.
ಯೆಹೆಜ್ಕೇಲನು 30 : 17 (OCVKN)
ಓನಿನ‡ ಓನಿನ ಕೆಲವು ಪ್ರತಿಗಳಲ್ಲಿ ಅವೆನ ಇನ್ನೊಂದು ಹೆಸರು ಸೂರ್ಯನಗರ ಮತ್ತು ಪಿಬೇಸೆತಿನ ಯೌವನಸ್ಥರು ಖಡ್ಗದಿಂದ ಸಾಯುವರು. ಈ ಪಟ್ಟಣಗಳ ನಿವಾಸಿಗಳು ತಾವಾಗಿಯೇ ಸೆರೆಯಾಗಿ ಹೋಗುವುವು.
ಯೆಹೆಜ್ಕೇಲನು 30 : 18 (OCVKN)
ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.
ಯೆಹೆಜ್ಕೇಲನು 30 : 19 (OCVKN)
ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”
ಯೆಹೆಜ್ಕೇಲನು 30 : 20 (OCVKN)
ಫರೋಹನ ತೋಳುಗಳು ಮುರಿದದ್ದು ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,
ಯೆಹೆಜ್ಕೇಲನು 30 : 21 (OCVKN)
“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.
ಯೆಹೆಜ್ಕೇಲನು 30 : 22 (OCVKN)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.
ಯೆಹೆಜ್ಕೇಲನು 30 : 23 (OCVKN)
ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
ಯೆಹೆಜ್ಕೇಲನು 30 : 24 (OCVKN)
ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.
ಯೆಹೆಜ್ಕೇಲನು 30 : 25 (OCVKN)
ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.
ಯೆಹೆಜ್ಕೇಲನು 30 : 26 (OCVKN)
ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”
❮
❯