ಯೆಹೆಜ್ಕೇಲನು 35 : 1 (OCVKN)
ಎದೋಮಿಗೆ ವಿರೋಧವಾದ ಪ್ರವಾದನೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಯೆಹೆಜ್ಕೇಲನು 35 : 2 (OCVKN)
“ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,
ಯೆಹೆಜ್ಕೇಲನು 35 : 3 (OCVKN)
ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
ಯೆಹೆಜ್ಕೇಲನು 35 : 4 (OCVKN)
ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.
ಯೆಹೆಜ್ಕೇಲನು 35 : 5 (OCVKN)
“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.
ಯೆಹೆಜ್ಕೇಲನು 35 : 6 (OCVKN)
ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.
ಯೆಹೆಜ್ಕೇಲನು 35 : 7 (OCVKN)
ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
ಯೆಹೆಜ್ಕೇಲನು 35 : 8 (OCVKN)
ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು.
ಯೆಹೆಜ್ಕೇಲನು 35 : 9 (OCVKN)
ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.
ಯೆಹೆಜ್ಕೇಲನು 35 : 10 (OCVKN)
“ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
ಯೆಹೆಜ್ಕೇಲನು 35 : 11 (OCVKN)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
ಯೆಹೆಜ್ಕೇಲನು 35 : 12 (OCVKN)
ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.
ಯೆಹೆಜ್ಕೇಲನು 35 : 13 (OCVKN)
ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
ಯೆಹೆಜ್ಕೇಲನು 35 : 14 (OCVKN)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.
ಯೆಹೆಜ್ಕೇಲನು 35 : 15 (OCVKN)
ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”
❮
❯
1
2
3
4
5
6
7
8
9
10
11
12
13
14
15