ಯೆಹೆಜ್ಕೇಲನು 48 : 1 (OCVKN)
ದೇಶದ ವಿಭಜನೆ “ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ.
ಯೆಹೆಜ್ಕೇಲನು 48 : 2 (OCVKN)
ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
ಯೆಹೆಜ್ಕೇಲನು 48 : 3 (OCVKN)
ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ನಫ್ತಾಲಿಗೆ ಒಂದು ಭಾಗವಾಗಿದೆ.
ಯೆಹೆಜ್ಕೇಲನು 48 : 4 (OCVKN)
ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ಮನಸ್ಸೆಗೆ ಒಂದು ಭಾಗ.
ಯೆಹೆಜ್ಕೇಲನು 48 : 5 (OCVKN)
ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಎಫ್ರಾಯೀಮಿಗೆ ಒಂದು ಭಾಗ.
ಯೆಹೆಜ್ಕೇಲನು 48 : 6 (OCVKN)
ಎಫ್ರಾಯೀಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೆ ರೂಬೇನ್ ಗೆ ಒಂದು ಭಾಗ.
ಯೆಹೆಜ್ಕೇಲನು 48 : 7 (OCVKN)
ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ.
ಯೆಹೆಜ್ಕೇಲನು 48 : 8 (OCVKN)
ಯೆಹೆಜ್ಕೇಲನು 48 : 9 (OCVKN)
“ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು. “ನೀವು ಯೆಹೋವ ದೇವರಿಗೆ ಅರ್ಪಿಸುವಂತಹ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು.
ಯೆಹೆಜ್ಕೇಲನು 48 : 10 (OCVKN)
ಅವರಿಗಾಗಿ ಎಂದರೆ ಯಾಜಕರಿಗಾಗಿ ಇದೇ ಪರಿಶುದ್ಧ ಕಾಣಿಕೆ ಆಗಿರಬೇಕು. ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು. ಅದರ ಮಧ್ಯದಲ್ಲಿ ಯೆಹೋವ ದೇವರ ಪರಿಶುದ್ಧ ಸ್ಥಳವೂ ಇರಬೇಕು.
ಯೆಹೆಜ್ಕೇಲನು 48 : 11 (OCVKN)
ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.
ಯೆಹೆಜ್ಕೇಲನು 48 : 12 (OCVKN)
ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು.
ಯೆಹೆಜ್ಕೇಲನು 48 : 13 (OCVKN)
“ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
ಯೆಹೆಜ್ಕೇಲನು 48 : 14 (OCVKN)
ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.
ಯೆಹೆಜ್ಕೇಲನು 48 : 15 (OCVKN)
“ಸುಮಾರು ಎರಡೂವರೆ ಕಿಲೋಮೀಟರ್ ಅಗಲ ಮತ್ತು ಸುಮಾರು ಹದಿಮೂರು ಕಿಲೋಮೀಟರ್ ಉದ್ದದ ಉಳಿದ ಪ್ರದೇಶವು ನಗರದ ಸಾಮಾನ್ಯ ಬಳಕೆಗಾಗಿ, ಇದು ಮನೆಗಳು ಮತ್ತು ಹುಲ್ಲುಗಾವಲುಗಳನ್ನು ಹೊಂದಿರುತ್ತದೆ. ನಗರವು ಅದರ ಮಧ್ಯದಲ್ಲಿ ಇರುತ್ತದೆ;
ಯೆಹೆಜ್ಕೇಲನು 48 : 16 (OCVKN)
ಮತ್ತು ಅದರ ಅಳತೆಯು ಈ ರೀತಿ ಇರುತ್ತದೆ: ಉತ್ತರದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ದಕ್ಷಿಣದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ಪೂರ್ವಕ್ಕೆ ಸುಮಾರು ಎರಡೂವರೆ ಕಿಲೋಮೀಟರ್, ಪಶ್ಚಿಮಕ್ಕೆ ಸುಮಾರು ಎರಡೂವರೆ ಕಿಲೋಮೀಟರ್.
ಯೆಹೆಜ್ಕೇಲನು 48 : 17 (OCVKN)
ಪಟ್ಟಣದ ಹುಲ್ಲುಗಾವಲು ಹೀಗಿರಬೇಕು. ಉತ್ತರದಲ್ಲಿ 135 ಮೀಟರ್ ದಕ್ಷಿಣದಲ್ಲಿ 135 ಮೀಟರ್ ಪೂರ್ವದಲ್ಲಿ 135 ಮೀಟರ್; ಪಶ್ಚಿಮದಲ್ಲಿ 135 ಮೀಟರ್.
ಯೆಹೆಜ್ಕೇಲನು 48 : 18 (OCVKN)
ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿರುವಂಥದ್ದೂ ಉದ್ದದಲ್ಲಿ ಉಳಿದ ಭೂಮಿಯು ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧಭಾಗಕ್ಕೆ ಎದುರಾಗಿರಬೇಕು. ಅದರ ಆದಾಯವು ಪಟ್ಟಣದಲ್ಲಿ ಸೇವೆಮಾಡುವವರ ಆಹಾರಕ್ಕಾಗುವಷ್ಟು ಇರಬೇಕು.
ಯೆಹೆಜ್ಕೇಲನು 48 : 19 (OCVKN)
ಪಟ್ಟಣದಲ್ಲಿ ಸೇವೆಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದಲೇ ಅದರಲ್ಲಿಯೇ ಸೇವೆಮಾಡಬೇಕು.
ಯೆಹೆಜ್ಕೇಲನು 48 : 20 (OCVKN)
ಎಲ್ಲಾ ಕಾಣಿಕೆಯ ಸ್ಥಳವು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು. ನೀವು ಪರಿಶುದ್ಧ ವಿಶೇಷ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸೊತ್ತಿನ ಸಂಗಡ ಅರ್ಪಿಸಬೇಕು.
ಯೆಹೆಜ್ಕೇಲನು 48 : 21 (OCVKN)
“ಪರಿಶುದ್ಧ ಭಾಗವೂ ಪಟ್ಟಣದ ಸೊತ್ತಿಗೂ ಈ ಕಡೆಗೂ ಆ ಕಡೆಗೂ ಉಳಿದ ಭೂಮಿಯು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರುವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂಥದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಮೀಸಲಾದ ಪವಿತ್ರ ಕ್ಷೇತ್ರವೂ ಪವಿತ್ರಾಲಯವೂ ಅದರ ಮಧ್ಯದಲ್ಲಿರುವುವು.
ಯೆಹೆಜ್ಕೇಲನು 48 : 22 (OCVKN)
ಇದಲ್ಲದೆ ಲೇವಿಯರ ಸೊತ್ತಿನಿಂದ ಮೊದಲುಗೊಂಡು ಪಟ್ಟಣದ ಸೊತ್ತಿನಿಂದ ಪ್ರಧಾನನ ನಡುವೆ ಇರುವಂಥದ್ದು ಯೆಹೂದದ ಮೇರೆಗೂ ಬೆನ್ಯಾಮೀನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಸಲ್ಲಬೇಕು.
ಯೆಹೆಜ್ಕೇಲನು 48 : 23 (OCVKN)
“ಮಿಕ್ಕ ಗೋತ್ರಗಳ ವಿಷಯವೇನೆಂದರೆ: “ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಬೆನ್ಯಾಮೀನನ ಒಂದು ಭಾಗವಾಗಿದೆ.
ಯೆಹೆಜ್ಕೇಲನು 48 : 24 (OCVKN)
ಬೆನ್ಯಾಮೀನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಸಿಮೆಯೋನ್ ಒಂದು ಭಾಗವಾಗಿದೆ.
ಯೆಹೆಜ್ಕೇಲನು 48 : 25 (OCVKN)
ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಸ್ಸಾಕಾರ್ ನ ಒಂದು ಭಾಗವಾಗಿದೆ.
ಯೆಹೆಜ್ಕೇಲನು 48 : 26 (OCVKN)
ಇಸ್ಸಾಕಾರ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಜೆಬುಲೂನ್ ನ ಒಂದು ಭಾಗವಾದೆ;
ಯೆಹೆಜ್ಕೇಲನು 48 : 27 (OCVKN)
ಜೆಬುಲೂನ್ ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಗಾದ್ ನ ಒಂದು ಭಾಗವಾಗಿದೆ.
ಯೆಹೆಜ್ಕೇಲನು 48 : 28 (OCVKN)
ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.
ಯೆಹೆಜ್ಕೇಲನು 48 : 29 (OCVKN)
“ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ಯೆಹೆಜ್ಕೇಲನು 48 : 30 (OCVKN)
ನೂತನ ಪಟ್ಟಣದ ಬಾಗಿಲುಗಳು “ಪಟ್ಟಣದ ಹೊರಗೆ ನಿರ್ಗಮನ ಹೀಗಿರಬೇಕು: “ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
ಯೆಹೆಜ್ಕೇಲನು 48 : 31 (OCVKN)
ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.
ಯೆಹೆಜ್ಕೇಲನು 48 : 32 (OCVKN)
ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪೂರ್ವದಲ್ಲಿ ಮೂರು ಬಾಗಿಲುಗಳಿರುತ್ತವೆ: ಯೋಸೇಫ್ ಬಾಗಿಲು ಒಂದು, ಬೆನ್ಯಾಮೀನನ ಬಾಗಿಲು, ಒಂದು ದಾನ್ ಬಾಗಿಲು ಒಂದು.
ಯೆಹೆಜ್ಕೇಲನು 48 : 33 (OCVKN)
ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ದಕ್ಷಿಣದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಸಿಮೆಯೋನ್ ಬಾಗಿಲು, ಒಂದು ಇಸ್ಸಾಕಾರ್ ನ ಬಾಗಿಲು, ಒಂದು ಜೆಬುಲೂನ್ ನ ಬಾಗಿಲು.
ಯೆಹೆಜ್ಕೇಲನು 48 : 34 (OCVKN)
ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪಶ್ಚಿಮದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು.
ಯೆಹೆಜ್ಕೇಲನು 48 : 35 (OCVKN)
“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ* ಯೆಹೋವ ದೇವರ ನೆಲೆ ಮೂಲ ಯೆಹೋವ ಶಾಮ್ಮಾ ನೆಲೆಯಾಗಿರುವರು ’ ” ಎಂಬುದೇ ಆಗಿರುವುದು.
❮
❯