ಎಜ್ರನು 1 : 1 (OCVKN)
ಕೋರೆಷನು ಸ್ವದೇಶಕ್ಕೆ ಹೋಗುವುದಕ್ಕೆ ಅಪ್ಪಣೆ ಕೊಟ್ಟದ್ದು
ಎಜ್ರನು 1 : 2 (OCVKN)
ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ: POS “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: OE “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.
ಎಜ್ರನು 1 : 3 (OCVKN)
ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!
ಎಜ್ರನು 1 : 4 (OCVKN)
ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ”
ಎಜ್ರನು 1 : 5 (OCVKN)
ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.
ಎಜ್ರನು 1 : 6 (OCVKN)
ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.
ಎಜ್ರನು 1 : 7 (OCVKN)
ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.
ಎಜ್ರನು 1 : 8 (OCVKN)
ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.
ಎಜ್ರನು 1 : 9 (OCVKN)
ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.
ಎಜ್ರನು 1 : 10 (OCVKN)
ಬಂಗಾರದ 30 ಬಟ್ಟಲುಗಳು. ಬೆಳ್ಳಿಯ 410 ಬಟ್ಟಲುಗಳು. ಇನ್ನಿತರು 1,000 ವಸ್ತುಗಳು.
ಎಜ್ರನು 1 : 11 (OCVKN)
ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.

1 2 3 4 5 6 7 8 9 10 11