ಎಜ್ರನು 5 : 1 (OCVKN)
ದಾರ್ಯಾವೆಷನಿಗೆ ತತ್ತೆನೈಯ ಪತ್ರ ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
ಎಜ್ರನು 5 : 2 (OCVKN)
ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
ಎಜ್ರನು 5 : 3 (OCVKN)
ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.
ಎಜ್ರನು 5 : 4 (OCVKN)
ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು.
ಎಜ್ರನು 5 : 5 (OCVKN)
ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವವರೆಗೂ, ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಉತ್ತರವನ್ನು ಪತ್ರದಲ್ಲಿ ಕಳುಹಿಸಿದರು.
ಎಜ್ರನು 5 : 6 (OCVKN)
ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.
ಎಜ್ರನು 5 : 7 (OCVKN)
ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: POS ಅರಸನಾದ ದಾರ್ಯಾವೆಷನಿಗೆ: OE OS ಸರ್ವತಾ ಕ್ಷೇಮ. OE
ಎಜ್ರನು 5 : 8 (OCVKN)
ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.
ಎಜ್ರನು 5 : 9 (OCVKN)
“ಆಗ ಈ ಆಲಯವನ್ನು ಕಟ್ಟುವುದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ನಾವು ಆ ಹಿರಿಯರನ್ನು ಕೇಳಿದೆವು.
ಎಜ್ರನು 5 : 10 (OCVKN)
ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಹೆಸರುಗಳನ್ನು ನಿಮಗೆ ಬರೆದು ತಿಳಿಸುವಂತೆ ಅವರ ಹೆಸರುಗಳನ್ನು ಕೇಳಿದೆವು.
ಎಜ್ರನು 5 : 11 (OCVKN)
ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ.
ಎಜ್ರನು 5 : 12 (OCVKN)
ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.
ಎಜ್ರನು 5 : 13 (OCVKN)
“ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು.
ಎಜ್ರನು 5 : 14 (OCVKN)
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು.
ಎಜ್ರನು 5 : 15 (OCVKN)
ಅವನಿಗೆ, ‘ಈ ಸಾಮಗ್ರಿಗಳನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿರುವ ದೇವಾಲಯಕ್ಕೆ ತೆಗೆದುಕೊಂಡು ಹೋಗು. ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟು,’ ಎಂದು ಆಜ್ಞಾಪಿಸಿದನು.
ಎಜ್ರನು 5 : 16 (OCVKN)
“ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು.
ಎಜ್ರನು 5 : 17 (OCVKN)
“ಆದ್ದರಿಂದ ಅರಸನಿಗೆ ಸರಿ ತೋರುವುದಾದರೆ, ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ, ಇಲ್ಲವೋ ಎಂಬುದನ್ನು ಬಾಬಿಲೋನಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.

1 2 3 4 5 6 7 8 9 10 11 12 13 14 15 16 17