ಎಜ್ರನು 6 : 1 (OCVKN)
ದಾರ್ಯಾವೆಷನ ತೀರ್ಪು ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು.
ಎಜ್ರನು 6 : 2 (OCVKN)
ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. POS ಅದರಲ್ಲಿ ಹೀಗೆ ಬರೆಯಲಾಗಿತ್ತು: OE
ಎಜ್ರನು 6 : 3 (OCVKN)
ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ.
ಎಜ್ರನು 6 : 4 (OCVKN)
ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು.
ಎಜ್ರನು 6 : 5 (OCVKN)
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು.
ಎಜ್ರನು 6 : 6 (OCVKN)
ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.
ಎಜ್ರನು 6 : 7 (OCVKN)
ದೇವರ ಆಲಯವನ್ನು ಕಟ್ಟುವ ಕೆಲಸಕ್ಕೆ ನೀವು ಅಡ್ಡಿಮಾಡಬೇಡಿರಿ. ಯೆಹೂದ್ಯರ ಅಧಿಪತಿಯೂ, ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.
ಎಜ್ರನು 6 : 8 (OCVKN)
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು.
ಎಜ್ರನು 6 : 9 (OCVKN)
ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು.
ಎಜ್ರನು 6 : 10 (OCVKN)
ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.
ಎಜ್ರನು 6 : 11 (OCVKN)
ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.
ಎಜ್ರನು 6 : 12 (OCVKN)
ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.
ಎಜ್ರನು 6 : 13 (OCVKN)
ದೇವಾಲಯ ಪ್ರತಿಷ್ಠಾಪನೆ ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
ಎಜ್ರನು 6 : 14 (OCVKN)
ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
ಎಜ್ರನು 6 : 15 (OCVKN)
ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು.
ಎಜ್ರನು 6 : 16 (OCVKN)
ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು.
ಎಜ್ರನು 6 : 17 (OCVKN)
ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.
ಎಜ್ರನು 6 : 18 (OCVKN)
ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
ಎಜ್ರನು 6 : 19 (OCVKN)
ಪಸ್ಕಹಬ್ಬ ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
ಎಜ್ರನು 6 : 20 (OCVKN)
ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು.
ಎಜ್ರನು 6 : 21 (OCVKN)
ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,
ಎಜ್ರನು 6 : 22 (OCVKN)
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22