ಎಜ್ರನು 7 : 1 (OCVKN)
ಎಜ್ರನು ಯೆರೂಸಲೇಮಿಗೆ ಬಂದದ್ದು ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು;
ಎಜ್ರನು 7 : 2 (OCVKN)
ಇವನು ಶಲ್ಲೂಮನ ಮಗನು; ಇವನು ಚಾದೋಕನ ಮಗನು; ಇವನು ಅಹೀಟೂಬನ ಮಗನು;
ಎಜ್ರನು 7 : 3 (OCVKN)
ಇವನು ಅಮರ್ಯನ ಮಗನು; ಇವನು ಅಜರ್ಯನ ಮಗನು; ಇವನು ಮೆರಾಯೋತನ ಮಗನು;
ಎಜ್ರನು 7 : 4 (OCVKN)
ಇವನು ಜೆರಹ್ಯನ ಮಗನು; ಇವನು ಉಜ್ಜೀಯನ ಮಗನು; ಇವನು ಬುಕ್ಕೀಯ ಮಗನು;
ಎಜ್ರನು 7 : 5 (OCVKN)
ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.
ಎಜ್ರನು 7 : 6 (OCVKN)
ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.
ಎಜ್ರನು 7 : 7 (OCVKN)
ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು.
ಎಜ್ರನು 7 : 8 (OCVKN)
ಅರಸನ ಏಳನೆಯ ವರ್ಷದ, ಐದನೆಯ ತಿಂಗಳಲ್ಲಿ ಎಜ್ರನು ಯೆರೂಸಲೇಮಿಗೆ ಬಂದನು.
ಎಜ್ರನು 7 : 9 (OCVKN)
ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.
ಎಜ್ರನು 7 : 10 (OCVKN)
ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.
ಎಜ್ರನು 7 : 11 (OCVKN)
ಅರ್ತಷಸ್ತನು ಎಜ್ರನಿಗೆ ಬರೆದ ಪತ್ರ
ಎಜ್ರನು 7 : 12 (OCVKN)
ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು: POS ರಾಜಾಧಿರಾಜನಾದ ಅರ್ತಷಸ್ತನು, OE OS ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, OE OS ವಂದನೆಗಳು. OE
ಎಜ್ರನು 7 : 13 (OCVKN)
ನನ್ನ ರಾಜ್ಯದಲ್ಲಿರುವ ಇಸ್ರಾಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರಿಗೆ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ, ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.
ಎಜ್ರನು 7 : 14 (OCVKN)
ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು.
ಎಜ್ರನು 7 : 15 (OCVKN)
ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,
ಎಜ್ರನು 7 : 16 (OCVKN)
ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.
ಎಜ್ರನು 7 : 17 (OCVKN)
ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.
ಎಜ್ರನು 7 : 18 (OCVKN)
ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಚಿತ್ತದ ಪ್ರಕಾರ ನಿನಗೂ, ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.
ಎಜ್ರನು 7 : 19 (OCVKN)
ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
ಎಜ್ರನು 7 : 20 (OCVKN)
ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
ಎಜ್ರನು 7 : 21 (OCVKN)
“ಅರ್ತಷಸ್ತ ರಾಜನಾದ ನಾನು, ಯೂಫ್ರೇಟೀಸ್ ನದಿ ಆಚೆಯ ಪ್ರಾಂತಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ ಯಾಜಕನೂ, ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
ಎಜ್ರನು 7 : 22 (OCVKN)
3.4 ಮೆಟ್ರಿಕ್ ಟನ್ ಬೆಳ್ಳಿಯನ್ನು, 16 ಮೆಟ್ರಿಕ್ ಟನ್ ಗೋಧಿಯನ್ನು, 2,200 ಲೀಟರ್ ದ್ರಾಕ್ಷಾರಸವನ್ನು, 2,200 ಲೀಟರ್ ಎಣ್ಣೆಯನ್ನು, ಇಷ್ಟರ ಮಟ್ಟಿಗೂ ಕೊಡಬೇಕು. ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
ಎಜ್ರನು 7 : 23 (OCVKN)
ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು.
ಎಜ್ರನು 7 : 24 (OCVKN)
ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.”
ಎಜ್ರನು 7 : 25 (OCVKN)
“ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.
ಎಜ್ರನು 7 : 26 (OCVKN)
ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”
ಎಜ್ರನು 7 : 27 (OCVKN)
ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.
ಎಜ್ರನು 7 : 28 (OCVKN)
ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28