ಗಲಾತ್ಯದವರಿಗೆ 1 : 1 (OCVKN)
ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
ಗಲಾತ್ಯದವರಿಗೆ 1 : 2 (OCVKN)
ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು:
ಗಲಾತ್ಯದವರಿಗೆ 1 : 3 (OCVKN)
ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ.
ಗಲಾತ್ಯದವರಿಗೆ 1 : 4 (OCVKN)
ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.
ಗಲಾತ್ಯದವರಿಗೆ 1 : 5 (OCVKN)
ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್.
ಗಲಾತ್ಯದವರಿಗೆ 1 : 6 (OCVKN)
ಬೇರೆ ಸುವಾರ್ತೆ ಇಲ್ಲ ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
ಗಲಾತ್ಯದವರಿಗೆ 1 : 7 (OCVKN)
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.
ಗಲಾತ್ಯದವರಿಗೆ 1 : 8 (OCVKN)
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ಗಲಾತ್ಯದವರಿಗೆ 1 : 9 (OCVKN)
ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.
ಗಲಾತ್ಯದವರಿಗೆ 1 : 10 (OCVKN)
ಗಲಾತ್ಯದವರಿಗೆ 1 : 11 (OCVKN)
ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ. ದೇವರಿಂದ ಕರೆಹೊಂದಿದ ಪೌಲ ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.
ಗಲಾತ್ಯದವರಿಗೆ 1 : 12 (OCVKN)
ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.
ಗಲಾತ್ಯದವರಿಗೆ 1 : 13 (OCVKN)
ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.
ಗಲಾತ್ಯದವರಿಗೆ 1 : 14 (OCVKN)
ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.
ಗಲಾತ್ಯದವರಿಗೆ 1 : 15 (OCVKN)
ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,
ಗಲಾತ್ಯದವರಿಗೆ 1 : 16 (OCVKN)
ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.
ಗಲಾತ್ಯದವರಿಗೆ 1 : 17 (OCVKN)
ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು.
ಗಲಾತ್ಯದವರಿಗೆ 1 : 18 (OCVKN)
ಮೂರು ವರ್ಷಗಳ ನಂತರವೇ ನಾನು ಕೇಫನನ್ನು* ಅಥವಾ ಪೇತ್ರ ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.
ಗಲಾತ್ಯದವರಿಗೆ 1 : 19 (OCVKN)
ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
ಗಲಾತ್ಯದವರಿಗೆ 1 : 20 (OCVKN)
ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ.
ಗಲಾತ್ಯದವರಿಗೆ 1 : 21 (OCVKN)
ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.
ಗಲಾತ್ಯದವರಿಗೆ 1 : 22 (OCVKN)
ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
ಗಲಾತ್ಯದವರಿಗೆ 1 : 23 (OCVKN)
ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು.
ಗಲಾತ್ಯದವರಿಗೆ 1 : 24 (OCVKN)
ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24