ಗಲಾತ್ಯದವರಿಗೆ 3 : 1 (OCVKN)
ನಂಬಿಕೆಯೋ ನಿಯಮವೋ? ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?
ಗಲಾತ್ಯದವರಿಗೆ 3 : 2 (OCVKN)
ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?
ಗಲಾತ್ಯದವರಿಗೆ 3 : 3 (OCVKN)
ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?
ಗಲಾತ್ಯದವರಿಗೆ 3 : 4 (OCVKN)
ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ?
ಗಲಾತ್ಯದವರಿಗೆ 3 : 5 (OCVKN)
ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?
ಗಲಾತ್ಯದವರಿಗೆ 3 : 6 (OCVKN)
ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”* ಆದಿ 15:6
ಗಲಾತ್ಯದವರಿಗೆ 3 : 7 (OCVKN)
ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ.
ಗಲಾತ್ಯದವರಿಗೆ 3 : 8 (OCVKN)
ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,”† ಆದಿ 12:3; 18:18; 22:18 ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.
ಗಲಾತ್ಯದವರಿಗೆ 3 : 9 (OCVKN)
ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.
ಗಲಾತ್ಯದವರಿಗೆ 3 : 10 (OCVKN)
ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,”‡ ಧರ್ಮೋ 27:26 ಎಂದು ಬರೆದಿದೆ.
ಗಲಾತ್ಯದವರಿಗೆ 3 : 11 (OCVKN)
ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”§ ಹಬ 2:4
ಗಲಾತ್ಯದವರಿಗೆ 3 : 12 (OCVKN)
ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”* ಯಾಜಕ 18:5
ಗಲಾತ್ಯದವರಿಗೆ 3 : 13 (OCVKN)
ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,”† ಧರ್ಮೋ 21:23 ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.
ಗಲಾತ್ಯದವರಿಗೆ 3 : 14 (OCVKN)
ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.
ಗಲಾತ್ಯದವರಿಗೆ 3 : 15 (OCVKN)
ನಿಯಮವೂ ವಾಗ್ದಾನವೂ ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.
ಗಲಾತ್ಯದವರಿಗೆ 3 : 16 (OCVKN)
ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,”‡ ಆದಿ 12:7; 13:15; 24:7 ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.
ಗಲಾತ್ಯದವರಿಗೆ 3 : 17 (OCVKN)
ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.
ಗಲಾತ್ಯದವರಿಗೆ 3 : 18 (OCVKN)
ಏಕೆಂದರೆ ಆ ಬಾಧ್ಯತೆಯು ನಿಯಮದ ಪ್ರಕಾರವಾಗಿದ್ದರೆ, ಅದು ಇನ್ನು ವಾಗ್ದಾನದ ಮೇಲೆ ಆಧಾರವಾದದ್ದಲ್ಲ. ಆದರೆ ದೇವರು ತಮ್ಮ ಕೃಪೆಯಿಂದ ಅಬ್ರಹಾಮನಿಗೆ ವಾಗ್ದಾನದ ಮೂಲಕವೇ ಆ ಬಾಧ್ಯತೆಯನ್ನು ಕೊಟ್ಟಿದ್ದಾರೆ.
ಗಲಾತ್ಯದವರಿಗೆ 3 : 19 (OCVKN)
ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.
ಗಲಾತ್ಯದವರಿಗೆ 3 : 20 (OCVKN)
ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.
ಗಲಾತ್ಯದವರಿಗೆ 3 : 21 (OCVKN)
ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.
ಗಲಾತ್ಯದವರಿಗೆ 3 : 22 (OCVKN)
ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.
ಗಲಾತ್ಯದವರಿಗೆ 3 : 23 (OCVKN)
ದೇವಪುತ್ರರು ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.
ಗಲಾತ್ಯದವರಿಗೆ 3 : 24 (OCVKN)
ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.
ಗಲಾತ್ಯದವರಿಗೆ 3 : 25 (OCVKN)
ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.
ಗಲಾತ್ಯದವರಿಗೆ 3 : 26 (OCVKN)
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
ಗಲಾತ್ಯದವರಿಗೆ 3 : 27 (OCVKN)
ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.
ಗಲಾತ್ಯದವರಿಗೆ 3 : 28 (OCVKN)
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.
ಗಲಾತ್ಯದವರಿಗೆ 3 : 29 (OCVKN)
ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.
❮
❯