ಗಲಾತ್ಯದವರಿಗೆ 5 : 1 (OCVKN)
ಕ್ರಿಸ್ತ ಯೇಸುವಿನಲ್ಲಿ ಸ್ವಾತಂತ್ರ್ಯ
ಗಲಾತ್ಯದವರಿಗೆ 5 : 2 (OCVKN)
ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ. ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.
ಗಲಾತ್ಯದವರಿಗೆ 5 : 3 (OCVKN)
ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ.
ಗಲಾತ್ಯದವರಿಗೆ 5 : 4 (OCVKN)
ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ಗಲಾತ್ಯದವರಿಗೆ 5 : 5 (OCVKN)
ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.
ಗಲಾತ್ಯದವರಿಗೆ 5 : 6 (OCVKN)
ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.
ಗಲಾತ್ಯದವರಿಗೆ 5 : 7 (OCVKN)
ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?
ಗಲಾತ್ಯದವರಿಗೆ 5 : 8 (OCVKN)
ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ.
ಗಲಾತ್ಯದವರಿಗೆ 5 : 9 (OCVKN)
ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು.
ಗಲಾತ್ಯದವರಿಗೆ 5 : 10 (OCVKN)
ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.
ಗಲಾತ್ಯದವರಿಗೆ 5 : 11 (OCVKN)
ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?
ಗಲಾತ್ಯದವರಿಗೆ 5 : 12 (OCVKN)
ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ!
ಗಲಾತ್ಯದವರಿಗೆ 5 : 13 (OCVKN)
ಪವಿತ್ರಾತ್ಮರಿಗೆ ಅನುಗುಣವಾಗಿ ನಡೆಯತಕ್ಕದ್ದು ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.
ಗಲಾತ್ಯದವರಿಗೆ 5 : 14 (OCVKN)
ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,”* ಯಾಜಕ 19:18 ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.
ಗಲಾತ್ಯದವರಿಗೆ 5 : 15 (OCVKN)
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.
ಗಲಾತ್ಯದವರಿಗೆ 5 : 16 (OCVKN)
ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.
ಗಲಾತ್ಯದವರಿಗೆ 5 : 17 (OCVKN)
ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.
ಗಲಾತ್ಯದವರಿಗೆ 5 : 18 (OCVKN)
ಆದರೆ ನೀವು ದೇವರ ಆತ್ಮದಿಂದ ನಡೆಸಿಕೊಳ್ಳುವವರಾದರೆ, ನಿಯಮದ ಅಧೀನತೆಯಲ್ಲಿ ಇರುವವರಲ್ಲ.
ಗಲಾತ್ಯದವರಿಗೆ 5 : 19 (OCVKN)
ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,
ಗಲಾತ್ಯದವರಿಗೆ 5 : 20 (OCVKN)
ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,
ಗಲಾತ್ಯದವರಿಗೆ 5 : 21 (OCVKN)
ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ಗಲಾತ್ಯದವರಿಗೆ 5 : 22 (OCVKN)
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,
ಗಲಾತ್ಯದವರಿಗೆ 5 : 23 (OCVKN)
ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
ಗಲಾತ್ಯದವರಿಗೆ 5 : 24 (OCVKN)
ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ಗಲಾತ್ಯದವರಿಗೆ 5 : 25 (OCVKN)
ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.
ಗಲಾತ್ಯದವರಿಗೆ 5 : 26 (OCVKN)
ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26