ಆದಿಕಾಂಡ 10 : 1 (OCVKN)
ಜನಾಂಗಗಳ ಪಟ್ಟಿ ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:
ಆದಿಕಾಂಡ 10 : 2 (OCVKN)
ಯೆಫೆತನ ವಂಶಜರು ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.
ಆದಿಕಾಂಡ 10 : 3 (OCVKN)
ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.
ಆದಿಕಾಂಡ 10 : 4 (OCVKN)
ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.* ದೋದಾನೀಮ್ ಇತರ ಹಸ್ತಪ್ರತಿಗಳಲ್ಲಿ ರೋಡಾನೀಮ್
ಆದಿಕಾಂಡ 10 : 5 (OCVKN)
ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.
ಆದಿಕಾಂಡ 10 : 6 (OCVKN)
ಹಾಮನ ವಂಶಜರು ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.
ಆದಿಕಾಂಡ 10 : 7 (OCVKN)
ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.
ಆದಿಕಾಂಡ 10 : 8 (OCVKN)
ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.
ಆದಿಕಾಂಡ 10 : 9 (OCVKN)
ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.
ಆದಿಕಾಂಡ 10 : 10 (OCVKN)
ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.
ಆದಿಕಾಂಡ 10 : 11 (OCVKN)
ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ
ಆದಿಕಾಂಡ 10 : 12 (OCVKN)
ಮತ್ತು ನಿನೆವೆ ಹಾಗೂ ಕೆಲಹ ಮಧ್ಯದಲ್ಲಿರುವ ರೆಸೆನ್ ಮಹಾಪಟ್ಟಣವನ್ನು ಕಟ್ಟಿಸಿದನು.
ಆದಿಕಾಂಡ 10 : 13 (OCVKN)
ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು
ಆದಿಕಾಂಡ 10 : 14 (OCVKN)
ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,
ಆದಿಕಾಂಡ 10 : 15 (OCVKN)
ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.
ಆದಿಕಾಂಡ 10 : 16 (OCVKN)
ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು
ಆದಿಕಾಂಡ 10 : 17 (OCVKN)
ಹಿವ್ವಿಯರು, ಅರ್ಕಿಯರು, ಸೀನಿಯರು,
ಆದಿಕಾಂಡ 10 : 18 (OCVKN)
ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
ಆದಿಕಾಂಡ 10 : 19 (OCVKN)
ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.
ಆದಿಕಾಂಡ 10 : 20 (OCVKN)
ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು.
ಆದಿಕಾಂಡ 10 : 21 (OCVKN)
ಶೇಮನ ವಂಶಜರು ಯೆಫೆತನ ಹಿರಿಯ ಸಹೋದರನೂ ಏಬೆರನ ಮಕ್ಕಳ ಮೂಲಪುರುಷನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
ಆದಿಕಾಂಡ 10 : 22 (OCVKN)
ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.
ಆದಿಕಾಂಡ 10 : 23 (OCVKN)
ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.[† ಮೆಷೆಕ್ ಹೀಬ್ರೂ ಭಾಷೆಯಲ್ಲಿ ಮಷ್ ನೋಡಿರಿ 1 ಪೂರ್ವ 1: 17 ]
ಆದಿಕಾಂಡ 10 : 24 (OCVKN)
ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ,
ಆದಿಕಾಂಡ 10 : 25 (OCVKN)
ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.
ಆದಿಕಾಂಡ 10 : 26 (OCVKN)
ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,
ಆದಿಕಾಂಡ 10 : 29 (OCVKN)
ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.
ಆದಿಕಾಂಡ 10 : 30 (OCVKN)
ಅವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವದಿಕ್ಕಿನ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.
ಆದಿಕಾಂಡ 10 : 31 (OCVKN)
ಇವರೇ ತಮ್ಮ ಕುಟುಂಬಗಳ, ತಮ್ಮ ಭಾಷೆಗಳ ಪ್ರಕಾರ, ತಮ್ಮ ದೇಶಗಳಲ್ಲಿ, ತಮ್ಮ ಜನಾಂಗಗಳ ಪ್ರಕಾರ ಶೇಮನ ಪುತ್ರರು.
ಆದಿಕಾಂಡ 10 : 32 (OCVKN)
ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32