ಆದಿಕಾಂಡ 13 : 1 (OCVKN)
ಅಬ್ರಾಮನು ಲೋಟನನ್ನು ಅಗಲಿದ್ದು ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತೆಗೆದುಕೊಂಡು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ನೆಗೆವಕ್ಕೆ ಪ್ರಯಾಣಮಾಡಿದನು.
ಆದಿಕಾಂಡ 13 : 2 (OCVKN)
ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.
ಆದಿಕಾಂಡ 13 : 3 (OCVKN)
ಅವನು ತನ್ನ ಪ್ರಯಾಣಗಳಲ್ಲಿ ನೆಗೆವದಿಂದ ಬೇತೇಲಿಗೆ, ಎಂದರೆ ಮೊದಲು ಬೇತೇಲಿಗೂ ಆಯಿ ಎಂಬ ಊರಿಗೂ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೆ ಬಂದನು.
ಆದಿಕಾಂಡ 13 : 4 (OCVKN)
ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
ಆದಿಕಾಂಡ 13 : 5 (OCVKN)
ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
ಆದಿಕಾಂಡ 13 : 6 (OCVKN)
ಆಗ ಅವರು ಒಂದಾಗಿ ವಾಸಿಸಲಿಕ್ಕೆ ಆ ಸ್ಥಳ ಸಾಲದೆ ಹೋಯಿತು. ಅವರಿಬ್ಬರ ಸಂಪತ್ತು ಬಹಳವಾಗಿದ್ದರಿಂದ ಒಂದೇ ಸ್ಥಳದಲ್ಲಿ ಅವರು ವಾಸವಾಗಿರಲು ಆಗಲಿಲ್ಲ.
ಆದಿಕಾಂಡ 13 : 7 (OCVKN)
ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
ಆದಿಕಾಂಡ 13 : 8 (OCVKN)
ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.
ಆದಿಕಾಂಡ 13 : 9 (OCVKN)
ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.
ಆದಿಕಾಂಡ 13 : 10 (OCVKN)
ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.
ಆದಿಕಾಂಡ 13 : 11 (OCVKN)
ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.
ಆದಿಕಾಂಡ 13 : 12 (OCVKN)
ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು.
ಆದಿಕಾಂಡ 13 : 13 (OCVKN)
ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.
ಆದಿಕಾಂಡ 13 : 14 (OCVKN)
ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.
ಆದಿಕಾಂಡ 13 : 15 (OCVKN)
ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ಆದಿಕಾಂಡ 13 : 16 (OCVKN)
ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.
ಆದಿಕಾಂಡ 13 : 17 (OCVKN)
ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.
ಆದಿಕಾಂಡ 13 : 18 (OCVKN)
ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.

1 2 3 4 5 6 7 8 9 10 11 12 13 14 15 16 17 18