ಆದಿಕಾಂಡ 21 : 1 (OCVKN)
ಇಸಾಕನ ಜನನ ಯೆಹೋವ ದೇವರು ಸಾರಳಿಗೆ ವಾಗ್ದಾನ ಮಾಡಿದಂತೆ ಆಕೆಗೆ ದಯೆತೋರಿಸಿದರು.
ಆದಿಕಾಂಡ 21 : 2 (OCVKN)
ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
ಆದಿಕಾಂಡ 21 : 3 (OCVKN)
ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ, ಇಸಾಕ, ಎಂದು ಹೆಸರಿಟ್ಟನು.
ಆದಿಕಾಂಡ 21 : 4 (OCVKN)
ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು.
ಆದಿಕಾಂಡ 21 : 5 (OCVKN)
ಅಬ್ರಹಾಮನ ಮಗ ಇಸಾಕನು ಜನಿಸಿದಾಗ ಅವನು ನೂರು ವರ್ಷದವನಾಗಿದ್ದನು.
ಆದಿಕಾಂಡ 21 : 6 (OCVKN)
ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.
ಆದಿಕಾಂಡ 21 : 7 (OCVKN)
ಸಾರಳು ಮಕ್ಕಳಿಗೆ ಹಾಲು ಕುಡಿಸುವಳೆಂದು ಅಬ್ರಹಾಮನಿಗೆ ಯಾರು ಹೇಳುತ್ತಿದ್ದರು? ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು,” ಎಂದಳು.
ಆದಿಕಾಂಡ 21 : 8 (OCVKN)
ಹಾಗರ್ ಮತ್ತು ಇಷ್ಮಾಯೇಲರನ್ನು ಹೊರಹಾಕಿದ್ದು ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.
ಆದಿಕಾಂಡ 21 : 9 (OCVKN)
ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ,
ಆದಿಕಾಂಡ 21 : 10 (OCVKN)
ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು.
ಆದಿಕಾಂಡ 21 : 11 (OCVKN)
ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು.
ಆದಿಕಾಂಡ 21 : 12 (OCVKN)
ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.
ಆದಿಕಾಂಡ 21 : 13 (OCVKN)
ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು.
ಆದಿಕಾಂಡ 21 : 14 (OCVKN)
ಆದಿಕಾಂಡ 21 : 15 (OCVKN)
ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು. ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,
ಆದಿಕಾಂಡ 21 : 16 (OCVKN)
ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.
ಆದಿಕಾಂಡ 21 : 17 (OCVKN)
ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.
ಆದಿಕಾಂಡ 21 : 18 (OCVKN)
ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು.
ಆದಿಕಾಂಡ 21 : 19 (OCVKN)
ಆದಿಕಾಂಡ 21 : 20 (OCVKN)
ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು. ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.
ಆದಿಕಾಂಡ 21 : 21 (OCVKN)
ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.
ಆದಿಕಾಂಡ 21 : 22 (OCVKN)
ಬೇರ್ಷೆಬದಲ್ಲಿ ಒಡಂಬಡಿಕೆ ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.
ಆದಿಕಾಂಡ 21 : 23 (OCVKN)
ಆದ್ದರಿಂದ ನೀನು ನನಗೂ, ನನ್ನ ಮಗನಿಗೂ, ನನ್ನ ಮೊಮ್ಮಗನಿಗೂ ವಂಚನೆ ಮಾಡುವುದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣಮಾಡು. ನಾನು ನಿನಗೆ ಒಳ್ಳೆಯದನ್ನೇ ಮಾಡಿದ ಪ್ರಕಾರ, ನೀನು ನನಗೂ, ನೀನು ವಾಸಮಾಡುತ್ತಿರುವ ಈ ದೇಶಕ್ಕೂ ಒಳ್ಳೆಯದನ್ನೇ ಮಾಡಬೇಕು,” ಎಂದನು.
ಆದಿಕಾಂಡ 21 : 24 (OCVKN)
ಆದಿಕಾಂಡ 21 : 25 (OCVKN)
ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು. ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.
ಆದಿಕಾಂಡ 21 : 26 (OCVKN)
ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು.
ಆದಿಕಾಂಡ 21 : 27 (OCVKN)
ಆಗ ಅಬ್ರಹಾಮನು ಕುರಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು. ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
ಆದಿಕಾಂಡ 21 : 28 (OCVKN)
ಅಬ್ರಹಾಮನು ಹಿಂಡಿನಿಂದ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ಮಾಡಿ ನಿಲ್ಲಿಸಿದನು.
ಆದಿಕಾಂಡ 21 : 29 (OCVKN)
ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಆ ಏಳು ಹೆಣ್ಣು ಕುರಿಮರಿಗಳನ್ನು ಬೇರೆಯಾಗಿ ನಿಲ್ಲಿಸಿದ ಅರ್ಥ ಏನು?” ಎಂದನು.
ಆದಿಕಾಂಡ 21 : 30 (OCVKN)
ಆದಿಕಾಂಡ 21 : 31 (OCVKN)
ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು.
ಆದಿಕಾಂಡ 21 : 32 (OCVKN)
ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ* ಬೇರ್ಷೆಬ ಅರ್ಥ ಏಳು ಬಾವಿಗಳು ಮತ್ತು ಬಾವಿಯ ಪ್ರಮಾಣ. ಎಂದು ಅಬ್ರಹಾಮನು ಹೆಸರಿಟ್ಟನು. ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು.
ಆದಿಕಾಂಡ 21 : 33 (OCVKN)
ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.
ಆದಿಕಾಂಡ 21 : 34 (OCVKN)
ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34