ಆದಿಕಾಂಡ 23 : 1 (OCVKN)
ಸಾರಳ ಮರಣ ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು.
ಆದಿಕಾಂಡ 23 : 2 (OCVKN)
ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.
ಆದಿಕಾಂಡ 23 : 3 (OCVKN)
ಆಗ ಅಬ್ರಹಾಮನು ತನ್ನ ಹೆಂಡತಿಯ ಶವದ ಬಳಿಯಿಂದ ಎದ್ದು, ಹಿತ್ತಿಯರ ಬಳಿಗೆ ಬಂದು, ಅವರಿಗೆ,
ಆದಿಕಾಂಡ 23 : 4 (OCVKN)
“ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.
ಆದಿಕಾಂಡ 23 : 5 (OCVKN)
ಹಿತ್ತಿಯರು ಅಬ್ರಹಾಮನಿಗೆ ಉತ್ತರಕೊಟ್ಟು,
ಆದಿಕಾಂಡ 23 : 6 (OCVKN)
“ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.
ಆದಿಕಾಂಡ 23 : 7 (OCVKN)
ಆಗ ಅಬ್ರಹಾಮನು ಎದ್ದು, ಆ ದೇಶದ ಜನರಾದ ಹಿತ್ತಿಯರ ಮುಂದೆ ತಲೆಬಾಗಿ,
ಆದಿಕಾಂಡ 23 : 8 (OCVKN)
ಅವರ ಸಂಗಡ ಮಾತನಾಡಿ, “ನಾನು ನನ್ನ ಹೆಂಡತಿಯ ಶವವನ್ನು ಹೂಳಿಡುವುದು ನಿಮ್ಮ ಮನಸ್ಸಿಗೆ ಸರಿಬಿದ್ದರೆ, ನನ್ನ ಮಾತು ಕೇಳಿ ಚೋಹರನ ಮಗ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
ಆದಿಕಾಂಡ 23 : 9 (OCVKN)
ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.
ಆದಿಕಾಂಡ 23 : 10 (OCVKN)
ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,
ಆದಿಕಾಂಡ 23 : 11 (OCVKN)
“ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.
ಆದಿಕಾಂಡ 23 : 12 (OCVKN)
ಆಗ ಅಬ್ರಹಾಮನು ದೇಶದ ಜನರ ಮುಂದೆ ತಲೆಬಾಗಿ,
ಆದಿಕಾಂಡ 23 : 13 (OCVKN)
ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.
ಆದಿಕಾಂಡ 23 : 14 (OCVKN)
ಎಫ್ರೋನನು ಅಬ್ರಹಾಮನಿಗೆ ಉತ್ತರವಾಗಿ,
ಆದಿಕಾಂಡ 23 : 15 (OCVKN)
“ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ* ನಾನೂರು ಶೆಕೆಲ್ ಸುಮಾರು 4.6 ಕಿಲೋಗ್ರಾಂ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.
ಆದಿಕಾಂಡ 23 : 16 (OCVKN)
ಆದಿಕಾಂಡ 23 : 17 (OCVKN)
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು. ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,
ಆದಿಕಾಂಡ 23 : 18 (OCVKN)
ಹಿತ್ತಿಯರ ಮುಂದೆಯೂ, ಅವರ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ದೃಢವಾಯಿತು.
ಆದಿಕಾಂಡ 23 : 19 (OCVKN)
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿಟ್ಟನು.
ಆದಿಕಾಂಡ 23 : 20 (OCVKN)
ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.

1 2 3 4 5 6 7 8 9 10 11 12 13 14 15 16 17 18 19 20