ಆದಿಕಾಂಡ 28 : 1 (OCVKN)
ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಆಜ್ಞಾಪಿಸಿದ್ದೇನೆಂದರೆ, “ಕಾನಾನ್ಯರ ಸ್ತ್ರೀಯರನ್ನು ನೀನು ಮದುವೆಯಾಗಬಾರದು.
ಆದಿಕಾಂಡ 28 : 2 (OCVKN)
ಕೂಡಲೇ ನಿನ್ನ ತಾಯಿಯ ತಂದೆ ಬೆತೂಯೇಲನು ಇರುವ ಪದ್ದನ್ ಅರಾಮಿಗೆ ಹೋಗು. ನಿನ್ನ ತಾಯಿಯ ಸಹೋದರ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಹೆಂಡತಿಯನ್ನಾಗಿ ಮಾಡಿಕೋ.
ಆದಿಕಾಂಡ 28 : 3 (OCVKN)
ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.
ಆದಿಕಾಂಡ 28 : 4 (OCVKN)
ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.
ಆದಿಕಾಂಡ 28 : 5 (OCVKN)
ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
ಆದಿಕಾಂಡ 28 : 6 (OCVKN)
ಇಸಾಕನು ಯಾಕೋಬನನ್ನು ಆಶೀರ್ವದಿಸಿ, ಅವನಿಗೆ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ, ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ, ಅವನಿಗೆ, “ಕಾನಾನ್ಯರ ಪುತ್ರಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳಬಾರದು,” ಎಂದು ಆಜ್ಞಾಪಿಸಿದ್ದನ್ನೂ, ಏಸಾವನು ತಿಳಿದುಕೊಂಡನು.
ಆದಿಕಾಂಡ 28 : 7 (OCVKN)
ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ, ಪದ್ದನ್ ಅರಾಮಿಗೆ ಹೋದದ್ದನ್ನೂ
ಆದಿಕಾಂಡ 28 : 8 (OCVKN)
ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,
ಆದಿಕಾಂಡ 28 : 9 (OCVKN)
ಅವನು ಇಷ್ಮಾಯೇಲನ ಬಳಿಗೆ ಹೋಗಿ, ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗ ಇಷ್ಮಾಯೇಲನ ಮಗಳೂ, ನೆಬಾಯೋತನ ತಂಗಿಯೂ ಆಗಿರುವ ಮಹಲತ್ ಎಂಬವಳನ್ನೂ ಮದುವೆಮಾಡಿಕೊಂಡನು.
ಆದಿಕಾಂಡ 28 : 10 (OCVKN)
ಯಾಕೋಬನ ಕನಸು ಆಗ ಯಾಕೋಬನು ಬೇರ್ಷೆಬದಿಂದ ಹಾರಾನಿನ ಕಡೆಗೆ ಹೊರಟನು.
ಆದಿಕಾಂಡ 28 : 11 (OCVKN)
ಅವನು ಒಂದು ಸ್ಥಳಕ್ಕೆ ಸೇರಿದಾಗ, ಸೂರ್ಯಾಸ್ತಮವಾದದ್ದರಿಂದ ಅಲ್ಲಿ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದು ತಲೆ ದಿಂಬನ್ನಾಗಿ ಇಟ್ಟುಕೊಂಡು, ಆ ಸ್ಥಳದಲ್ಲಿ ಮಲಗಿಕೊಂಡನು.
ಆದಿಕಾಂಡ 28 : 12 (OCVKN)
ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ಆದಿಕಾಂಡ 28 : 13 (OCVKN)
ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
ಆದಿಕಾಂಡ 28 : 14 (OCVKN)
ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.
ಆದಿಕಾಂಡ 28 : 15 (OCVKN)
ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.
ಆದಿಕಾಂಡ 28 : 16 (OCVKN)
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು.
ಆದಿಕಾಂಡ 28 : 17 (OCVKN)
ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.
ಆದಿಕಾಂಡ 28 : 18 (OCVKN)
ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ಆದಿಕಾಂಡ 28 : 19 (OCVKN)
ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್* ಬೇತೇಲ್ ಅಂದರೆ ದೇವರ ಮನೆ , ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.
ಆದಿಕಾಂಡ 28 : 20 (OCVKN)
ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,
ಆದಿಕಾಂಡ 28 : 21 (OCVKN)
ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು.
ಆದಿಕಾಂಡ 28 : 22 (OCVKN)
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22