ಆದಿಕಾಂಡ 30 : 1 (OCVKN)
ಆದಿಕಾಂಡ 30 : 2 (OCVKN)
ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.
ಆದಿಕಾಂಡ 30 : 3 (OCVKN)
ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.
ಆದಿಕಾಂಡ 30 : 4 (OCVKN)
ಅದಕ್ಕೆ ಆಕೆಯು, “ನನ್ನ ದಾಸಿ ಬಿಲ್ಹಳು ಇದ್ದಾಳೆ, ಅವಳ ಬಳಿಗೆ ಹೋಗು, ಅವಳು ಹೆತ್ತು ನನ್ನ ಮಡಿಲಲ್ಲಿ ಇಡಲಿ. ಅವಳಿಂದ ನನಗೆ ಮಕ್ಕಳಾಗುವರು,” ಎಂದಳು. ಹೀಗೆ ಅವನಿಗೆ ತನ್ನ ದಾಸಿ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳನ್ನು ಸ್ವೀಕರಿಸಿದನು.
ಆದಿಕಾಂಡ 30 : 5 (OCVKN)
ಬಿಲ್ಹಳು ಗರ್ಭಿಣಿಯಾಗಿ, ಯಾಕೋಬನಿಗೆ ಮಗನನ್ನು ಹೆತ್ತಳು.
ಆದಿಕಾಂಡ 30 : 6 (OCVKN)
ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್* ದಾನ್ ಅಂದರೆ ನ್ಯಾಯತೀರ್ಪು ಎಂದು ಹೆಸರಿಟ್ಟಳು.
ಆದಿಕಾಂಡ 30 : 7 (OCVKN)
ರಾಹೇಲಳ ದಾಸಿ ಬಿಲ್ಹಳು ಮತ್ತೆ ಗರ್ಭಿಣಿಯಾಗಿ, ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 8 (OCVKN)
ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ನಫ್ತಾಲಿ ಪದದ ಅರ್ಥ ಹೋರಾಟ ಎಂದು ಹೆಸರಿಟ್ಟಳು.
ಆದಿಕಾಂಡ 30 : 9 (OCVKN)
ಲೇಯಳು ತಾನು ಹೆರುವುದು ನಿಂತಿತೆಂದು ತಿಳಿದು, ತನ್ನ ದಾಸಿ ಜಿಲ್ಪಳನ್ನು ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟಳು.
ಆದಿಕಾಂಡ 30 : 10 (OCVKN)
ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
ಆದಿಕಾಂಡ 30 : 11 (OCVKN)
ಆಗ ಲೇಯಳು, “ಎಂಥಾ ಸೌಭಾಗ್ಯ,” ಎಂದು ಹೇಳಿ ಅವನಿಗೆ ಗಾದ್ ಗಾದ್ ಅಂದರೆ ಸೌಭಾಗ್ಯ ಎಂದು ಹೆಸರಿಟ್ಟಳು.
ಆದಿಕಾಂಡ 30 : 12 (OCVKN)
ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 13 (OCVKN)
ಆಗ ಲೇಯಳು, “ನಾನು ಧನ್ಯಳಾದೆನು, ಏಕೆಂದರೆ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು,” ಎಂದು ಹೇಳಿ ಅವನಿಗೆ ಆಶೇರ್§ ಆಶೇರ್ ಅಂದರೆ ಧನ್ಯನು ಎಂದು ಹೆಸರಿಟ್ಟಳು.
ಆದಿಕಾಂಡ 30 : 14 (OCVKN)
ಆದಿಕಾಂಡ 30 : 15 (OCVKN)
ರೂಬೇನನು ಗೋಧಿ ಕೊಯ್ಯುವ ಕಾಲದಲ್ಲಿ ಹೋಗಿ, ಹೊಲದಲ್ಲಿ ದುದಾಯಿ* ದುದಾಯಿ ಒಂದು ರೀತಿಯ ಕಾಮಜನಕ ಫಲಗಳನ್ನು ಕಂಡು, ತಾಯಿ ಲೇಯಳ ಬಳಿಗೆ ಕೆಲವು ಫಲಗಳನ್ನು ತಂದಾಗ, ರಾಹೇಲಳು ಲೇಯಳಿಗೆ, “ನಿನ್ನ ಮಗನು ತಂದ ಫಲಗಳಲ್ಲಿ ಕೆಲವನ್ನು ನನಗೆ ಕೊಡು,” ಎಂದಳು.
ಆದಿಕಾಂಡ 30 : 16 (OCVKN)
ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.
ಆದಿಕಾಂಡ 30 : 17 (OCVKN)
ಯಾಕೋಬನು ಸಾಯಂಕಾಲದಲ್ಲಿ ಹೊಲದಿಂದ ಬಂದಾಗ, ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನ ಬಳಿಗೆ ಬರಬೇಕು. ನನ್ನ ಮಗನು ತಂದ ದುದಾಯಿ ಫಲಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ,” ಎಂದಳು. ಆದ್ದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು. ಆಗ ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದ್ದರಿಂದ, ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 18 (OCVKN)
ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಇಸ್ಸಾಕಾರ್ ಹೀಬ್ರೂ ಭಾಷೆಯಲ್ಲಿ ಪ್ರತಿಫಲ ಎಂದು ಹೆಸರಿಟ್ಟಳು.
ಆದಿಕಾಂಡ 30 : 19 (OCVKN)
ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು,
ಆದಿಕಾಂಡ 30 : 20 (OCVKN)
ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಜೆಬುಲೂನ್ ಪದದ ಅರ್ಥ ಗೌರವ ಎಂದು ಹೆಸರಿಟ್ಟಳು.
ಆದಿಕಾಂಡ 30 : 21 (OCVKN)
ಆದಿಕಾಂಡ 30 : 22 (OCVKN)
ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು, ಆಕೆಗೆ ದೀನಾ ಎಂದು ಹೆಸರಿಟ್ಟಳು. ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.
ಆದಿಕಾಂಡ 30 : 23 (OCVKN)
ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು.
ಆದಿಕಾಂಡ 30 : 24 (OCVKN)
ಆಕೆಯು, “ಯೆಹೋವ ದೇವರು ನನಗೆ ಮತ್ತೊಬ್ಬ ಮಗನನ್ನು ದಯಪಾಲಿಸುವರು,” ಎಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
ಆದಿಕಾಂಡ 30 : 25 (OCVKN)
ಯಾಕೋಬನ ಕುರಿಮಂದೆಯ ಅಭಿವೃದ್ಧಿ ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ, “ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವಂತೆ ನನ್ನನ್ನು ಕಳುಹಿಸಿಕೊಡು.
ಆದಿಕಾಂಡ 30 : 26 (OCVKN)
ನಾನು ಯಾರಿಗೋಸ್ಕರ ನಿನಗೆ ಸೇವೆ ಮಾಡಿದೆನೋ, ಆ ನನ್ನ ಹೆಂಡತಿಯರನ್ನೂ, ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀಯೆ,” ಎಂದನು.
ಆದಿಕಾಂಡ 30 : 27 (OCVKN)
ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.
ಆದಿಕಾಂಡ 30 : 28 (OCVKN)
ನೀನು ನಿನ್ನ ಸಂಬಳವನ್ನು ನಿರ್ಣಯಿಸು. ಅದನ್ನು ನಾನು ನಿನಗೆ ಕೊಡುವೆನು,” ಎಂದನು.
ಆದಿಕಾಂಡ 30 : 29 (OCVKN)
ಅದಕ್ಕೆ ಯಾಕೋಬನು ಅವನಿಗೆ, “ನಾನು ನಿನಗೆ ಮಾಡಿದ ಸೇವೆಯನ್ನೂ, ನಿನ್ನ ಪಶುಗಳು ನನ್ನ ಬಳಿಯಲ್ಲಿ ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀನು ಬಲ್ಲೆ.
ಆದಿಕಾಂಡ 30 : 30 (OCVKN)
ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.
ಆದಿಕಾಂಡ 30 : 31 (OCVKN)
ಅದಕ್ಕೆ ಲಾಬಾನನು, “ನಿನಗೆ ನಾನು ಏನು ಕೊಡಲಿ?” ಎಂದನು. ಯಾಕೋಬನು, “ಏನೂ ಕೊಡಬೇಡ, ಒಂದು ವಿಷಯದಲ್ಲಿ ಒಪ್ಪಿಕೊಂಡರೆ, ನಾನು ಮತ್ತೆ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು.
ಆದಿಕಾಂಡ 30 : 32 (OCVKN)
ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
ಆದಿಕಾಂಡ 30 : 33 (OCVKN)
ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ, ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿಕೊಡುವುದು. ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳು ನನ್ನ ಬಳಿಯಲ್ಲಿದ್ದರೆ, ಅವು ಕದ್ದವುಗಳು ಎಂದು ಎಣಿಕೆಯಾಗಿರಲಿ,” ಎಂದನು.
ಆದಿಕಾಂಡ 30 : 34 (OCVKN)
ಲಾಬಾನನು, “ನೀನು ಹೇಳಿದಂತೆಯೇ ಆಗಲಿ,” ಎಂದನು.
ಆದಿಕಾಂಡ 30 : 35 (OCVKN)
ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಂದು ಬಣ್ಣವಿದ್ದವುಗಳನ್ನೂ ವಿಂಗಡಿಸಿ, ತನ್ನ ಪುತ್ರರ ಕೈಗೆ ಕೊಟ್ಟನು.
ಆದಿಕಾಂಡ 30 : 36 (OCVKN)
ತನಗೂ, ಯಾಕೋಬನಿಗೂ ಮಧ್ಯದಲ್ಲಿ ಮೂರು ದಿನಗಳ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಯನ್ನು ಮೇಯಿಸಿದನು.
ಆದಿಕಾಂಡ 30 : 37 (OCVKN)
ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು, ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು, ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು.
ಆದಿಕಾಂಡ 30 : 38 (OCVKN)
ಮಂದೆಗಳು ನೀರು ಕುಡಿಯುವುದಕ್ಕೆ ಬಂದಾಗ, ಅವು ಗರ್ಭಧರಿಸಬೇಕೆಂದು ನೀರು ಕುಡಿಯುವ ದೋಣಿಗಳಲ್ಲಿ ತಾನು ತೊಗಟೆ ಸುಲಿದ ಕೋಲುಗಳನ್ನು ಅವುಗಳ ಮುಂದೆ ಇಟ್ಟನು.
ಆದಿಕಾಂಡ 30 : 39 (OCVKN)
ಮಂದೆಗಳು ಆ ಕೋಲುಗಳನ್ನು ನೋಡಿ, ಸಂಗಮ ಮಾಡಿದ್ದರಿಂದ, ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
ಆದಿಕಾಂಡ 30 : 40 (OCVKN)
ಯಾಕೋಬನು ಕುರಿಗಳನ್ನು ಬೇರೆ ಮಾಡಿ, ಲಾಬಾನನ ಮಂದೆಯಲ್ಲಿರುವ ರೇಖೆಗಳುಳ್ಳ ಆಡುಕುರಿಗಳೆದುರಾಗಿಯೂ ಕಂದು ಬಣ್ಣ ಉಳ್ಳವುಗಳೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ, ಅವುಗಳನ್ನು ಬೇರೆ ಇಟ್ಟುಕೊಂಡನು.
ಆದಿಕಾಂಡ 30 : 41 (OCVKN)
ಬಲವಾದ ಕುರಿಗಳು ಸಂಗಮ ಮಾಡುವಾಗ ಯಾಕೋಬನು ಆ ಕುರಿಗಳು ಕೋಲುಗಳನ್ನು ನೋಡುತ್ತಾ ಗರ್ಭಧರಿಸುವ ಹಾಗೆ ಕೋಲುಗಳನ್ನು ಕುರಿಗಳ ಕಣ್ಣೆದುರಾಗಿ ದೋಣಿಗಳಲ್ಲಿ ಇಡುತ್ತಿದ್ದನು.
ಆದಿಕಾಂಡ 30 : 42 (OCVKN)
ಆದರೆ ಕುರಿಗಳು ಬಲಹೀನವಾಗಿದ್ದಾಗ, ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನವಾದವುಗಳು ಲಾಬಾನನಿಗೂ, ಬಲವಾದವುಗಳು ಯಾಕೋಬನಿಗೂ ಆದವು.
ಆದಿಕಾಂಡ 30 : 43 (OCVKN)
ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದ್ದರಿಂದ, ಬಹು ಕುರಿಗಳೂ ದಾಸದಾಸಿಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43