ಆದಿಕಾಂಡ 5 : 1 (OCVKN)
ಆದಾಮನಿಂದ ನೋಹನವರೆಗೆ ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.
ಆದಿಕಾಂಡ 5 : 2 (OCVKN)
ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ”* ಹೀಬ್ರೂ ಭಾಷೆಯಲ್ಲಿ ಆದಾಮ ಎಂದು ಕರೆದರು.
ಆದಿಕಾಂಡ 5 : 3 (OCVKN)
ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ, “ಸೇತ್” ಎಂದು ಹೆಸರಿಟ್ಟನು.
ಆದಿಕಾಂಡ 5 : 4 (OCVKN)
ಸೇತನು ಹುಟ್ಟಿದ ಮೇಲೆ ಆದಾಮನು ಗಂಡು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರು ವರುಷ ಬದುಕಿದನು.
ಆದಿಕಾಂಡ 5 : 5 (OCVKN)
ಆದಾಮನು ಒಟ್ಟು ಒಂಬೈನೂರ ಮೂವತ್ತು ವರುಷ ಬದುಕಿ ಸತ್ತನು.
ಆದಿಕಾಂಡ 5 : 6 (OCVKN)
ಸೇತನು ನೂರ ಐದು ವರುಷದವನಾದಾಗ ಎನೋಷನನ್ನು ಪಡೆದನು.
ಆದಿಕಾಂಡ 5 : 7 (OCVKN)
ಎನೋಷನು ಹುಟ್ಟಿದ ಮೇಲೆ ಸೇತನು ಎಂಟುನೂರ ಏಳು ವರುಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.
ಆದಿಕಾಂಡ 5 : 8 (OCVKN)
ಸೇತನು ಒಟ್ಟು ಒಂಬೈನೂರ ಹನ್ನೆರಡು ವರ್ಷ ಬದುಕಿ ಸತ್ತನು.
ಆದಿಕಾಂಡ 5 : 9 (OCVKN)
ಎನೋಷನು ತೊಂಬತ್ತು ವರ್ಷದವನಾದಾಗ ಕೇನಾನನನ್ನು ಪಡೆದನು.
ಆದಿಕಾಂಡ 5 : 10 (OCVKN)
ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.
ಆದಿಕಾಂಡ 5 : 11 (OCVKN)
ಅವನು ಒಟ್ಟು ಒಂಬೈನೂರ ಐದು ವರುಷ ಬದುಕಿ ಸತ್ತನು.
ಆದಿಕಾಂಡ 5 : 12 (OCVKN)
ಕೇನಾನನು ಎಪ್ಪತ್ತು ವರುಷದವನಾದಾಗ, ಅವನಿಂದ ಮಹಲಲೇಲನು ಹುಟ್ಟಿದನು.
ಆದಿಕಾಂಡ 5 : 13 (OCVKN)
ಕೇನಾನನು ಮಹಲಲೇಲನು ಹುಟ್ಟಿದ ಮೇಲೆ ಎಂಟುನೂರ ನಲವತ್ತು ವರ್ಷ ಬದುಕಿ, ಗಂಡು ಹೆಣ್ಣು ಮಕ್ಕಳನ್ನು ಪಡೆದನು.
ಆದಿಕಾಂಡ 5 : 14 (OCVKN)
ಕೇನಾನನು ಒಟ್ಟು ಒಂಬೈನೂರ ಹತ್ತು ವರ್ಷ ಬದುಕಿ ಸತ್ತನು.
ಆದಿಕಾಂಡ 5 : 15 (OCVKN)
ಮಹಲಲೇಲನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಯೆರೆದನು ಹುಟ್ಟಿದನು.
ಆದಿಕಾಂಡ 5 : 16 (OCVKN)
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಎಂಟುನೂರ ಮೂವತ್ತು ವರ್ಷ ಬದುಕಿ ಗಂಡು, ಹೆಣ್ಣು ಮಕ್ಕಳನ್ನು ಪಡೆದನು.
ಆದಿಕಾಂಡ 5 : 17 (OCVKN)
ಮಹಲಲೇಲನು ಎಂಟುನೂರ ತೊಂಬತ್ತೈದು ವರ್ಷ ಬದುಕಿ ತರುವಾಯ ಸತ್ತನು.
ಆದಿಕಾಂಡ 5 : 18 (OCVKN)
ಯೆರೆದನು ನೂರ ಅರವತ್ತೆರಡು ವರುಷದವನಾಗಿದ್ದಾಗ, ಅವನಿಂದ ಹನೋಕನು ಹುಟ್ಟಿದನು.
ಆದಿಕಾಂಡ 5 : 19 (OCVKN)
ಹನೋಕನು ಹುಟ್ಟಿದ ಮೇಲೆ, ಯೆರೆದನು ಎಂಟುನೂರು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
ಆದಿಕಾಂಡ 5 : 20 (OCVKN)
ಯೆರೆದನು ಒಟ್ಟು ಒಂಬೈನೂರ ಅರವತ್ತೆರಡು ವರ್ಷ ಬದುಕಿ, ತರುವಾಯ ಸತ್ತನು.
ಆದಿಕಾಂಡ 5 : 21 (OCVKN)
ಹನೋಕನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಮೆತೂಷೆಲಹನು ಹುಟ್ಟಿದನು.
ಆದಿಕಾಂಡ 5 : 22 (OCVKN)
ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
ಆದಿಕಾಂಡ 5 : 23 (OCVKN)
ಹನೋಕನು ಒಟ್ಟು ಮುನ್ನೂರ ಅರವತ್ತೈದು ವರ್ಷ ಬದುಕಿದನು.
ಆದಿಕಾಂಡ 5 : 24 (OCVKN)
ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.
ಆದಿಕಾಂಡ 5 : 25 (OCVKN)
ಮೆತೂಷೆಲಹನು ನೂರ ಎಂಬತ್ತೇಳು ವರ್ಷದವನಾಗಿದ್ದಾಗ, ಅವನಿಂದ ಲೆಮೆಕನು ಹುಟ್ಟಿದನು.
ಆದಿಕಾಂಡ 5 : 26 (OCVKN)
ಲೆಮೆಕನು ಹುಟ್ಟಿದ ಮೇಲೆ, ಮೆತೂಷೆಲಹನು ಏಳುನೂರ ಎಂಬತ್ತೆರಡು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
ಆದಿಕಾಂಡ 5 : 27 (OCVKN)
ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.
ಆದಿಕಾಂಡ 5 : 28 (OCVKN)
ಲೆಮೆಕನು ನೂರ ಎಂಬತ್ತೆರಡು ವರ್ಷದವನಾದಾಗ, ಒಬ್ಬ ಮಗನನ್ನು ಪಡೆದನು.
ಆದಿಕಾಂಡ 5 : 29 (OCVKN)
ಅವನಿಗೆ, ನೋಹ† ನೋಹ ಹೀಬ್ರೂ ಭಾಷೆಯಲ್ಲಿ ಸಾಂತ್ವನ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.
ಆದಿಕಾಂಡ 5 : 30 (OCVKN)
ನೋಹನು ಹುಟ್ಟಿದ ಮೇಲೆ, ಲೆಮೆಕನು ಗಂಡು, ಹೆಣ್ಣು ಮಕ್ಕಳನ್ನು ಪಡೆದು, ಐನೂರ ತೊಂಬತ್ತೈದು ವರ್ಷ ಬದುಕಿದನು.
ಆದಿಕಾಂಡ 5 : 31 (OCVKN)
ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿದನು. ತರುವಾಯ ಅವನು ಸತ್ತನು.
ಆದಿಕಾಂಡ 5 : 32 (OCVKN)
ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32