ಆದಿಕಾಂಡ 9 : 1 (OCVKN)
ನೋಹನ ಜೊತೆ ಯೆಹೋವ ದೇವರ ಒಡಂಬಡಿಕೆ ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
ಆದಿಕಾಂಡ 9 : 2 (OCVKN)
ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.
ಆದಿಕಾಂಡ 9 : 3 (OCVKN)
ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
ಆದಿಕಾಂಡ 9 : 4 (OCVKN)
“ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು.
ಆದಿಕಾಂಡ 9 : 5 (OCVKN)
ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.
ಆದಿಕಾಂಡ 9 : 6 (OCVKN)
“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.
ಆದಿಕಾಂಡ 9 : 7 (OCVKN)
7 ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.
ಆದಿಕಾಂಡ 9 : 8 (OCVKN)
ಇದಲ್ಲದೆ ದೇವರು ನೋಹನಿಗೂ ಅವನ ಸಂಗಡ ಇದ್ದ ಅವನ ಪುತ್ರರಿಗೂ ಹೇಳಿದ್ದೇನೆಂದರೆ,
ಆದಿಕಾಂಡ 9 : 9 (OCVKN)
“ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ
ಆದಿಕಾಂಡ 9 : 10 (OCVKN)
ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ
ಆದಿಕಾಂಡ 9 : 11 (OCVKN)
ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.”
ಆದಿಕಾಂಡ 9 : 12 (OCVKN)
ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ:
ಆದಿಕಾಂಡ 9 : 13 (OCVKN)
ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.
ಆದಿಕಾಂಡ 9 : 14 (OCVKN)
ನಾನು ಭೂಮಿಯ ಮೇಲೆ ಮೇಘಗಳನ್ನು ಬರಮಾಡುವಾಗ, ಆ ಮಳೆಬಿಲ್ಲು ಮೇಘಗಳಲ್ಲಿ ಕಂಡುಬರುವುದು.
ಆದಿಕಾಂಡ 9 : 15 (OCVKN)
ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.
ಆದಿಕಾಂಡ 9 : 16 (OCVKN)
ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”
ಆದಿಕಾಂಡ 9 : 17 (OCVKN)
ಆದಿಕಾಂಡ 9 : 18 (OCVKN)
ನಂತರ ದೇವರು ನೋಹನಿಗೆ, “ಈ ಮಳೆಬಿಲ್ಲು ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಮಧ್ಯದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತಾಗಿದೆ,” ಎಂದು ಹೇಳಿದರು. ನೋಹನ ಪುತ್ರರು ನಾವೆಯೊಳಗಿಂದ ಹೊರಬಂದ ನೋಹನ ಪುತ್ರರು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
ಆದಿಕಾಂಡ 9 : 19 (OCVKN)
ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.
ಆದಿಕಾಂಡ 9 : 20 (OCVKN)
ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು.
ಆದಿಕಾಂಡ 9 : 21 (OCVKN)
ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು.
ಆದಿಕಾಂಡ 9 : 22 (OCVKN)
ಕಾನಾನನ ತಂದೆ ಹಾಮನು, ತನ್ನ ತಂದೆಯ ಬೆತ್ತಲೆತನವನ್ನು ನೋಡಿ, ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿದನು.
ಆದಿಕಾಂಡ 9 : 23 (OCVKN)
ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತೆಗೆದುಕೊಂಡು, ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು, ಹಿಂಭಾಗವಾಗಿ ಹೋಗಿ, ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಮ್ಮುಖವಾಗಿದ್ದುದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
ಆದಿಕಾಂಡ 9 : 24 (OCVKN)
ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು, ತನ್ನ ಕಿರಿಯ ಮಗನು ತನಗೆ ಮಾಡಿದ್ದನ್ನು ತಿಳಿದನು.
ಆದಿಕಾಂಡ 9 : 25 (OCVKN)
ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”
ಆದಿಕಾಂಡ 9 : 26 (OCVKN)
ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.
ಆದಿಕಾಂಡ 9 : 27 (OCVKN)
ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.”
ಆದಿಕಾಂಡ 9 : 28 (OCVKN)
ಪ್ರಳಯವಾದ ಮೇಲೆ ನೋಹನು ಮುನ್ನೂರ ಐವತ್ತು ವರ್ಷ ಬದುಕಿದನು.
ಆದಿಕಾಂಡ 9 : 29 (OCVKN)
ನೋಹ ಒಟ್ಟು ಒಂಬೈನೂರ ಐವತ್ತು ವರ್ಷ ಜೀವಿಸಿ, ಸತ್ತನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29