ಇಬ್ರಿಯರಿಗೆ 1 : 1 (OCVKN)
ಕ್ರಿಸ್ತ ಯೇಸುವೇ ದೇವರ ಅಂತಿಮ ಮಾತು ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,
ಇಬ್ರಿಯರಿಗೆ 1 : 2 (OCVKN)
ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.
ಇಬ್ರಿಯರಿಗೆ 1 : 3 (OCVKN)
ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.
ಇಬ್ರಿಯರಿಗೆ 1 : 4 (OCVKN)
ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.
ಇಬ್ರಿಯರಿಗೆ 1 : 5 (OCVKN)
ಪುತ್ರ ಆಗಿರುವ ಕ್ರಿಸ್ತ ಯೇಸು ದೇವದೂತರಿಗಿಂತಲೂ ಶ್ರೇಷ್ಠರು ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ!”* ಕೀರ್ತನೆ 2:7 ಎಂದೂ, “ನಾನು ಆತನ ತಂದೆಯಾಗಿರುವೆನು; ಆತನು ನನಗೆ ಮಗನಾಗಿರುವನು!” † 2 ಸಮು 7:14; 1 ಪೂರ್ವ 17:13
ಇಬ್ರಿಯರಿಗೆ 1 : 6 (OCVKN)
6 ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!”‡ ಧರ್ಮೋ 32:43 ಎಂದು ಹೇಳಿದ್ದಾರೆ.
ಇಬ್ರಿಯರಿಗೆ 1 : 7 (OCVKN)
7 ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!”§ ಕೀರ್ತನೆ 104:4 ಎಂದು ಹೇಳಿದ್ದಾರೆ.
ಇಬ್ರಿಯರಿಗೆ 1 : 8 (OCVKN)
8 ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.
ಇಬ್ರಿಯರಿಗೆ 1 : 9 (OCVKN)
ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”* ಕೀರ್ತನೆ 45:6,7
ಇಬ್ರಿಯರಿಗೆ 1 : 10 (OCVKN)
10 ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.
ಇಬ್ರಿಯರಿಗೆ 1 : 11 (OCVKN)
ಅವು ನಾಶವಾಗುವವು. ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
ಇಬ್ರಿಯರಿಗೆ 1 : 12 (OCVKN)
ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”† ಕೀರ್ತನೆ 102:25-27
ಇಬ್ರಿಯರಿಗೆ 1 : 13 (OCVKN)
13 ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!”‡ ಕೀರ್ತನೆ 110:1 ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?
ಇಬ್ರಿಯರಿಗೆ 1 : 14 (OCVKN)
ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?
❮
❯
1
2
3
4
5
6
7
8
9
10
11
12
13
14