ಇಬ್ರಿಯರಿಗೆ 2 : 1 (OCVKN)
ಲಕ್ಷ್ಯಕೊಡಲು ಎಚ್ಚರಿಕೆ ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.
ಇಬ್ರಿಯರಿಗೆ 2 : 2 (OCVKN)
ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.
ಇಬ್ರಿಯರಿಗೆ 2 : 3 (OCVKN)
ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.
ಇಬ್ರಿಯರಿಗೆ 2 : 4 (OCVKN)
ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.
ಇಬ್ರಿಯರಿಗೆ 2 : 5 (OCVKN)
ಯೇಸುವಿನ ಪೂರ್ಣ ಮಾನವೀಯತೆ ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.
ಇಬ್ರಿಯರಿಗೆ 2 : 6 (OCVKN)
ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?
ಇಬ್ರಿಯರಿಗೆ 2 : 7 (OCVKN)
ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ* ಅಥವಾ ಸ್ವಲ್ಪ ಕಾಲಕ್ಕೆ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.
ಇಬ್ರಿಯರಿಗೆ 2 : 8 (OCVKN)
ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?”† ಕೀರ್ತನೆ 8:4,5,6 ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.
ಇಬ್ರಿಯರಿಗೆ 2 : 9 (OCVKN)
ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.
ಇಬ್ರಿಯರಿಗೆ 2 : 10 (OCVKN)
ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.
ಇಬ್ರಿಯರಿಗೆ 2 : 11 (OCVKN)
ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,
ಇಬ್ರಿಯರಿಗೆ 2 : 12 (OCVKN)
ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”‡ ಕೀರ್ತನೆ 22:22
ಇಬ್ರಿಯರಿಗೆ 2 : 13 (OCVKN)
13 ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.”§ ಯೆಶಾಯ 8:17 ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” * ಯೆಶಾಯ 8:18 ಎಂದು ಹೇಳಿದ್ದಾರೆ.
ಇಬ್ರಿಯರಿಗೆ 2 : 14 (OCVKN)
ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ
ಇಬ್ರಿಯರಿಗೆ 2 : 15 (OCVKN)
ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.
ಇಬ್ರಿಯರಿಗೆ 2 : 16 (OCVKN)
ಯೇಸು ನಿಜವಾಗಿಯೂ ದೂತರಿಗಾಗಿ ಹಾಗೆ ಮಾಡದೆ ಅಬ್ರಹಾಮನ ಸಂತತಿಯವರಿಗಾಗಿ ಹಾಗೆ ಮಾಡಿದರು.
ಇಬ್ರಿಯರಿಗೆ 2 : 17 (OCVKN)
ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.
ಇಬ್ರಿಯರಿಗೆ 2 : 18 (OCVKN)
ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ.
❮
❯
1
2
3
4
5
6
7
8
9
10
11
12
13
14
15
16
17
18