ಇಬ್ರಿಯರಿಗೆ 4 : 1 (OCVKN)
ದೇವಜನರಿಗೆ ಸಬ್ಬತ್ ಒಂದು ವಿಶ್ರಾಂತಿ ದಿನ ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.
ಇಬ್ರಿಯರಿಗೆ 4 : 2 (OCVKN)
ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.
ಇಬ್ರಿಯರಿಗೆ 4 : 3 (OCVKN)
ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,”* ಕೀರ್ತನೆ 95:11 ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.
ಇಬ್ರಿಯರಿಗೆ 4 : 4 (OCVKN)
ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಆದಿ 2:2 ಎಂತಲೂ,
ಇಬ್ರಿಯರಿಗೆ 4 : 5 (OCVKN)
ಮೇಲಿನ ವಾಕ್ಯಕ್ಕೆ ಸಂಬಂಧಿಸಿ, “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,” ಎಂದೂ ದೇವರು ಇನ್ನೊಂದು ಕಡೆ ಹೇಳಿದ್ದಾರೆ.
ಇಬ್ರಿಯರಿಗೆ 4 : 6 (OCVKN)
ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು.
ಇಬ್ರಿಯರಿಗೆ 4 : 7 (OCVKN)
ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.” ಕೀರ್ತನೆ 95:7,8
ಇಬ್ರಿಯರಿಗೆ 4 : 8 (OCVKN)
8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.
ಇಬ್ರಿಯರಿಗೆ 4 : 9 (OCVKN)
ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.
ಇಬ್ರಿಯರಿಗೆ 4 : 10 (OCVKN)
ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.
ಇಬ್ರಿಯರಿಗೆ 4 : 11 (OCVKN)
ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.
ಇಬ್ರಿಯರಿಗೆ 4 : 12 (OCVKN)
ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
ಇಬ್ರಿಯರಿಗೆ 4 : 13 (OCVKN)
ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.
ಇಬ್ರಿಯರಿಗೆ 4 : 14 (OCVKN)
ಯೇಸುವೇ ಶ್ರೇಷ್ಠ ಮಹಾಯಾಜಕರು ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.
ಇಬ್ರಿಯರಿಗೆ 4 : 15 (OCVKN)
ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.
ಇಬ್ರಿಯರಿಗೆ 4 : 16 (OCVKN)
ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.

1 2 3 4 5 6 7 8 9 10 11 12 13 14 15 16