ಇಬ್ರಿಯರಿಗೆ 5 : 1 (OCVKN)
ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.
ಇಬ್ರಿಯರಿಗೆ 5 : 2 (OCVKN)
ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.
ಇಬ್ರಿಯರಿಗೆ 5 : 3 (OCVKN)
ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.
ಇಬ್ರಿಯರಿಗೆ 5 : 4 (OCVKN)
ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.
ಇಬ್ರಿಯರಿಗೆ 5 : 5 (OCVKN)
ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!”* ಕೀರ್ತನೆ 2:7 ಎಂದು ಹೇಳಿದರು.
ಇಬ್ರಿಯರಿಗೆ 5 : 6 (OCVKN)
6 ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!”† ಕೀರ್ತನೆ 110:4 ಎಂದು ಹೇಳುತ್ತಾರೆ.
ಇಬ್ರಿಯರಿಗೆ 5 : 7 (OCVKN)
ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.
ಇಬ್ರಿಯರಿಗೆ 5 : 8 (OCVKN)
ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು.
ಇಬ್ರಿಯರಿಗೆ 5 : 9 (OCVKN)
ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.
ಇಬ್ರಿಯರಿಗೆ 5 : 10 (OCVKN)
ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.
ಇಬ್ರಿಯರಿಗೆ 5 : 11 (OCVKN)
ಬಿದ್ದು ಹೋಗುವುದರ ಬಗ್ಗೆ ಎಚ್ಚರಿಕೆ ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.
ಇಬ್ರಿಯರಿಗೆ 5 : 12 (OCVKN)
ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
ಇಬ್ರಿಯರಿಗೆ 5 : 13 (OCVKN)
ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.
ಇಬ್ರಿಯರಿಗೆ 5 : 14 (OCVKN)
ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.
❮
❯
1
2
3
4
5
6
7
8
9
10
11
12
13
14