ಹೋಶೇ 1 : 1 (OCVKN)
ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.
ಹೋಶೇ 1 : 2 (OCVKN)
ಹೋಶೇಯನ ಹೆಂಡತಿ ಮತ್ತು ಮಕ್ಕಳು ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.
ಹೋಶೇ 1 : 3 (OCVKN)
ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು.
ಹೋಶೇ 1 : 4 (OCVKN)
ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.
ಹೋಶೇ 1 : 5 (OCVKN)
ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.
ಹೋಶೇ 1 : 6 (OCVKN)
ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ* ಲೋರುಹಾಮಾ ಇದರ ಅರ್ಥ ಅಪ್ರೀಯ ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.
ಹೋಶೇ 1 : 7 (OCVKN)
ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.
ಹೋಶೇ 1 : 8 (OCVKN)
ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
ಹೋಶೇ 1 : 9 (OCVKN)
ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಲೋ ಅಮ್ಮಿ ಇದರ ಅರ್ಥ ನನ್ನ ಜನರಲ್ಲ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.
ಹೋಶೇ 1 : 10 (OCVKN)
“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.
ಹೋಶೇ 1 : 11 (OCVKN)
ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.

1 2 3 4 5 6 7 8 9 10 11