ಹೋಶೇ 6 : 1 (OCVKN)
ಪಶ್ಚಾತ್ತಾಪವಿಲ್ಲದ ಇಸ್ರಾಯೇಲರು ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.
ಹೋಶೇ 6 : 2 (OCVKN)
ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.
ಹೋಶೇ 6 : 3 (OCVKN)
ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.
ಹೋಶೇ 6 : 4 (OCVKN)
ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.
ಹೋಶೇ 6 : 5 (OCVKN)
ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.
ಹೋಶೇ 6 : 6 (OCVKN)
ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.
ಹೋಶೇ 6 : 7 (OCVKN)
ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.
ಹೋಶೇ 6 : 8 (OCVKN)
ಗಿಲ್ಯಾದ್ ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
ಹೋಶೇ 6 : 9 (OCVKN)
ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
ಹೋಶೇ 6 : 10 (OCVKN)
ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯೀಮಿನ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಅಪವಿತ್ರವಾಗಿದೆ.
ಹೋಶೇ 6 : 11 (OCVKN)
“ಯೆಹೂದವೇ, ನಿನಗೂ ಸಹ, ತಕ್ಕ ಸುಗ್ಗಿಯು ನೇಮಕವಾಗಿದೆ. “ಸೆರೆಯಾದ ನನ್ನ ಜನರಿಗೆ, ಪುನಃಸ್ಥಾಪನೆಯಾಗುವುದು.
❮
❯
1
2
3
4
5
6
7
8
9
10
11