ಹೋಶೇ 7 : 1 (OCVKN)
ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.
ಹೋಶೇ 7 : 2 (OCVKN)
ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.
ಹೋಶೇ 7 : 3 (OCVKN)
“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.
ಹೋಶೇ 7 : 4 (OCVKN)
ಅವರೆಲ್ಲರು ವ್ಯಭಿಚಾರಿಗಳು, ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. ಅವನು ಹಿಟ್ಟು ನಾದಿದ ಮೇಲೆ, ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ.
ಹೋಶೇ 7 : 5 (OCVKN)
ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
ಹೋಶೇ 7 : 6 (OCVKN)
ಅವರು ಹೊಂಚುಹಾಕಿಕೊಂಡಿದ್ದಾಗ, ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ. ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ ಬೆಳಿಗ್ಗೆ ಅದು ಪ್ರಜ್ವಲಿಸುವ ಬೆಂಕಿಯ ಹಾಗೆ ಉರಿಯುತ್ತದೆ.
ಹೋಶೇ 7 : 7 (OCVKN)
ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.
ಹೋಶೇ 7 : 8 (OCVKN)
“ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ. ಎಫ್ರಾಯೀಮು ತಿರುವಿ ಹಾಕದ ರೊಟ್ಟಿಯಾಗಿದ್ದಾನೆ.
ಹೋಶೇ 7 : 9 (OCVKN)
ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.
ಹೋಶೇ 7 : 10 (OCVKN)
ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.
ಹೋಶೇ 7 : 11 (OCVKN)
“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.
ಹೋಶೇ 7 : 12 (OCVKN)
ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, ನಾನು ಅವುಗಳನ್ನು ಹಿಡಿಯುತ್ತೇನೆ.
ಹೋಶೇ 7 : 13 (OCVKN)
ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.
ಹೋಶೇ 7 : 14 (OCVKN)
ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.
ಹೋಶೇ 7 : 15 (OCVKN)
ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ. ಆದರೂ ಅವರು ನನಗೆ ವಿರುದ್ಧವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.
ಹೋಶೇ 7 : 16 (OCVKN)
ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.

1 2 3 4 5 6 7 8 9 10 11 12 13 14 15 16