ಯೆಶಾಯ 1 : 1 (OCVKN)
ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.
ಯೆಶಾಯ 1 : 2 (OCVKN)
ದಂಗೆಕೋರ ರಾಷ್ಟ್ರ ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
ಯೆಶಾಯ 1 : 3 (OCVKN)
ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”
ಯೆಶಾಯ 1 : 4 (OCVKN)
ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.
ಯೆಶಾಯ 1 : 5 (OCVKN)
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.
ಯೆಶಾಯ 1 : 6 (OCVKN)
ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ.
ಯೆಶಾಯ 1 : 7 (OCVKN)
ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.
ಯೆಶಾಯ 1 : 8 (OCVKN)
ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.
ಯೆಶಾಯ 1 : 9 (OCVKN)
ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಯೆಶಾಯ 1 : 10 (OCVKN)
ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.
ಯೆಶಾಯ 1 : 11 (OCVKN)
“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.
ಯೆಶಾಯ 1 : 12 (OCVKN)
ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು.
ಯೆಶಾಯ 1 : 13 (OCVKN)
ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.
ಯೆಶಾಯ 1 : 14 (OCVKN)
ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
ಯೆಶಾಯ 1 : 15 (OCVKN)
ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!
ಯೆಶಾಯ 1 : 16 (OCVKN)
“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.
ಯೆಶಾಯ 1 : 17 (OCVKN)
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.
ಯೆಶಾಯ 1 : 18 (OCVKN)
“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.
ಯೆಶಾಯ 1 : 19 (OCVKN)
ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.
ಯೆಶಾಯ 1 : 20 (OCVKN)
ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.
ಯೆಶಾಯ 1 : 21 (OCVKN)
ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಯೆಶಾಯ 1 : 22 (OCVKN)
ನಿನ್ನ ಬೆಳ್ಳಿಯು ಕಂದಾಯಿತು. ನಿನ್ನ ದ್ರಾಕ್ಷಾರಸವು ನೀರಿನಿಂದ ಬೆರಕೆಯಾಯಿತು.
ಯೆಶಾಯ 1 : 23 (OCVKN)
ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.
ಯೆಶಾಯ 1 : 24 (OCVKN)
ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.
ಯೆಶಾಯ 1 : 25 (OCVKN)
ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.
ಯೆಶಾಯ 1 : 26 (OCVKN)
ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”
ಯೆಶಾಯ 1 : 27 (OCVKN)
ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
ಯೆಶಾಯ 1 : 28 (OCVKN)
ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.
ಯೆಶಾಯ 1 : 29 (OCVKN)
“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ಯೆಶಾಯ 1 : 30 (OCVKN)
ನೀವು ಬಾಡಿದ ಎಲೆಯುಳ್ಳ ಏಲಾ ಮರದಂತೆಯೂ, ನೀರಿಲ್ಲದ ತೋಟದಂತೆಯೂ ಇರುವಿರಿ.
ಯೆಶಾಯ 1 : 31 (OCVKN)
ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31