ಯೆಶಾಯ 11 : 1 (OCVKN)
ಇಷಯನ ಕೊಂಬೆ ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.
ಯೆಶಾಯ 11 : 2 (OCVKN)
ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,
ಯೆಶಾಯ 11 : 3 (OCVKN)
ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.
ಯೆಶಾಯ 11 : 4 (OCVKN)
ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.
ಯೆಶಾಯ 11 : 5 (OCVKN)
ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ.
ಯೆಶಾಯ 11 : 6 (OCVKN)
ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು.
ಯೆಶಾಯ 11 : 7 (OCVKN)
ಹಸುವು ಕರಡಿಯ ಸಂಗಡ ಮೇಯುವುವು; ಅವುಗಳ ಮರಿಗಳು ಜೊತೆಯಾಗಿ ಮಲಗುವುವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯುವುದು.
ಯೆಶಾಯ 11 : 8 (OCVKN)
ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.
ಯೆಶಾಯ 11 : 9 (OCVKN)
ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.
ಯೆಶಾಯ 11 : 10 (OCVKN)
ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.
ಯೆಶಾಯ 11 : 11 (OCVKN)
ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.
ಯೆಶಾಯ 11 : 12 (OCVKN)
ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.
ಯೆಶಾಯ 11 : 13 (OCVKN)
ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.
ಯೆಶಾಯ 11 : 14 (OCVKN)
ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.
ಯೆಶಾಯ 11 : 15 (OCVKN)
ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು.
ಯೆಶಾಯ 11 : 16 (OCVKN)
ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.
❮
❯
1
2
3
4
5
6
7
8
9
10
11
12
13
14
15
16