ಯೆಶಾಯ 21 : 1 (OCVKN)
ಬಾಬಿಲೋನಿನ ವಿರುದ್ಧವಾದ ಪ್ರವಾದನೆ ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.
ಯೆಶಾಯ 21 : 2 (OCVKN)
ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಯೆಶಾಯ 21 : 3 (OCVKN)
ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.
ಯೆಶಾಯ 21 : 4 (OCVKN)
ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
ಯೆಶಾಯ 21 : 5 (OCVKN)
ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.
ಯೆಶಾಯ 21 : 6 (OCVKN)
ಕರ್ತರು ನನಗೆ ಹೇಳಿದ್ದೇನೆಂದರೆ, “ಹೋಗು, ಕಾವಲುಗಾರರನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
ಯೆಶಾಯ 21 : 7 (OCVKN)
ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥ ಸಾಲುಗಳನ್ನು ನೋಡಿದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ.”
ಯೆಶಾಯ 21 : 8 (OCVKN)
ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
ಯೆಶಾಯ 21 : 9 (OCVKN)
ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”
ಯೆಶಾಯ 21 : 10 (OCVKN)
ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
ಯೆಶಾಯ 21 : 11 (OCVKN)
ಎದೋಮಿಗೆ ವಿರೋಧವಾದ ಪ್ರವಾದನೆ ದೂಮ* ದೂಮ ಅಂದರೆ ಮೌನ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”
ಯೆಶಾಯ 21 : 12 (OCVKN)
ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”
ಯೆಶಾಯ 21 : 13 (OCVKN)
ಅರೇಬಿಯದ ವಿರೋಧವಾದ ಪ್ರವಾದನೆ ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
ಯೆಶಾಯ 21 : 14 (OCVKN)
ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ.
ಯೆಶಾಯ 21 : 15 (OCVKN)
ಏಕೆಂದರೆ ಹಿರಿದ ಖಡ್ಗ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರಷ್ಟೆ.
ಯೆಶಾಯ 21 : 16 (OCVKN)
ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.
ಯೆಶಾಯ 21 : 17 (OCVKN)
ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.

1 2 3 4 5 6 7 8 9 10 11 12 13 14 15 16 17