ಯೆಶಾಯ 23 : 1 (OCVKN)
ಟೈರಿನ ವಿಷಯವಾದ ಪ್ರವಾದನೆ ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಯೆಶಾಯ 23 : 2 (OCVKN)
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಸೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ ಮೌನವಾಗಿರಿ.
ಯೆಶಾಯ 23 : 3 (OCVKN)
ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
ಯೆಶಾಯ 23 : 4 (OCVKN)
ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”
ಯೆಶಾಯ 23 : 5 (OCVKN)
ಈಜಿಪ್ಟಿನಿಂದ ಸುದ್ದಿ ಆದ ಹಾಗೆ ಟೈರಿನ ಸುದ್ದಿಗೆ ಬಹಳ ವೇದನೆ ಪಡುವರು.
ಯೆಶಾಯ 23 : 6 (OCVKN)
ತಾರ್ಷೀಷಿಗೆ ದಾಟಿ ಹೋಗಿರಿ, ದ್ವೀಪ ನಿವಾಸಿಗಳೇ ಗೋಳಾಡಿರಿ.
ಯೆಶಾಯ 23 : 7 (OCVKN)
ನಿಮ್ಮ ಉಲ್ಲಾಸದ ಪಟ್ಟಣವೂ, ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವುದಕ್ಕೆ ತೆಗೆದುಕೊಂಡು ಹೋಗುವವು.
ಯೆಶಾಯ 23 : 8 (OCVKN)
ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
ಯೆಶಾಯ 23 : 9 (OCVKN)
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.
ಯೆಶಾಯ 23 : 10 (OCVKN)
ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.
ಯೆಶಾಯ 23 : 11 (OCVKN)
ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.
ಯೆಶಾಯ 23 : 12 (OCVKN)
“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”
ಯೆಶಾಯ 23 : 13 (OCVKN)
ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.
ಯೆಶಾಯ 23 : 14 (OCVKN)
ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯಸ್ಥಾನವು ಹಾಳಾಯಿತು, ಎಂದು ಆತನು ಹೇಳಿದ್ದಾನೆ.
ಯೆಶಾಯ 23 : 15 (OCVKN)
ಯೆಶಾಯ 23 : 16 (OCVKN)
ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು: “ಮರೆತುಹೋದ ವೇಶ್ಯೆಯೇ, ಕಿನ್ನರಿಯನ್ನು ತೆಗೆದುಕೋ. ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು.”
ಯೆಶಾಯ 23 : 17 (OCVKN)
ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು.
ಯೆಶಾಯ 23 : 18 (OCVKN)
ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.

1 2 3 4 5 6 7 8 9 10 11 12 13 14 15 16 17 18