ಯೆಶಾಯ 3 : 1 (OCVKN)
ಯೆರೂಸಲೇಮಿನ ಹಾಗೂ ಯೆಹೂದದ ಮೇಲೆ ನ್ಯಾಯತೀರ್ಪು ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.
ಯೆಶಾಯ 3 : 2 (OCVKN)
ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,
ಯೆಶಾಯ 3 : 3 (OCVKN)
ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.
ಯೆಶಾಯ 3 : 4 (OCVKN)
“ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”
ಯೆಶಾಯ 3 : 5 (OCVKN)
ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.
ಯೆಶಾಯ 3 : 6 (OCVKN)
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು ಹೀಗೆ ಹೇಳುವನು, “ನಿನಗೆ ವಸ್ತ್ರವಿದೆ, ನಮ್ಮನ್ನು ನೀನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ.”
ಯೆಶಾಯ 3 : 7 (OCVKN)
ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು.
ಯೆಶಾಯ 3 : 8 (OCVKN)
ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.
ಯೆಶಾಯ 3 : 9 (OCVKN)
ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
ಯೆಶಾಯ 3 : 10 (OCVKN)
ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಯೆಶಾಯ 3 : 11 (OCVKN)
ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.
ಯೆಶಾಯ 3 : 12 (OCVKN)
ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.
ಯೆಶಾಯ 3 : 13 (OCVKN)
ನ್ಯಾಯಾಧೀಶರನ್ನು ಯೆಹೋವ ದೇವರು ಸ್ವಾಧೀನಪಡಿಸಿಕೊಂಡಿದ್ದಾರೆ; ಅವರು ಜನರನ್ನು ನಿರ್ಣಯಿಸಲು ಎದ್ದರು.
ಯೆಶಾಯ 3 : 14 (OCVKN)
ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಯೆಶಾಯ 3 : 15 (OCVKN)
ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.
ಯೆಶಾಯ 3 : 16 (OCVKN)
ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;
ಯೆಶಾಯ 3 : 17 (OCVKN)
ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”
ಯೆಶಾಯ 3 : 18 (OCVKN)
ಆ ದಿನದಲ್ಲಿ ಯೆಹೋವ ದೇವರು ಅವರ ಕಾಲಂದಿಗೆ, ತುರುಬು ಬಲೆ, ಅರ್ಧಚಂದ್ರ,
ಯೆಶಾಯ 3 : 19 (OCVKN)
ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,
ಯೆಶಾಯ 3 : 20 (OCVKN)
ಕಂಠ ವಸ್ತ್ರ, ಕಾಲ ಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,
ಯೆಶಾಯ 3 : 21 (OCVKN)
ಮುದ್ರೆ ಉಂಗುರ, ಮೂಗುತಿ,
ಯೆಶಾಯ 3 : 22 (OCVKN)
ಹಬ್ಬದ ಉಡಿಗೆ ತೊಡಿಗೆ, ಮೇಲಂಗಿ, ಶಾಲು, ಕೈಚೀಲ,
ಯೆಶಾಯ 3 : 23 (OCVKN)
ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.
ಯೆಶಾಯ 3 : 24 (OCVKN)
ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.
ಯೆಶಾಯ 3 : 25 (OCVKN)
ನಿನ್ನ ಗಂಡಸರು ಖಡ್ಗಕ್ಕೆ ತುತ್ತಾಗುವರು. ನಿನ್ನ ಶೂರರು ಯುದ್ಧದಲ್ಲಿ ಬೀಳುವರು.
ಯೆಶಾಯ 3 : 26 (OCVKN)
ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26