ಯೆಶಾಯ 32 : 1 (OCVKN)
ನೀತಿಯ ರಾಜ್ಯ ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
ಯೆಶಾಯ 32 : 2 (OCVKN)
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ಯೆಶಾಯ 32 : 3 (OCVKN)
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
ಯೆಶಾಯ 32 : 4 (OCVKN)
ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.
ಯೆಶಾಯ 32 : 5 (OCVKN)
ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. ಮೋಸಗಾರನು ಮಹನೀಯನೆನಿಸಿಕೊಳ್ಳನು.
ಯೆಶಾಯ 32 : 6 (OCVKN)
ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
ಯೆಶಾಯ 32 : 7 (OCVKN)
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
ಯೆಶಾಯ 32 : 8 (OCVKN)
ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
ಯೆಶಾಯ 32 : 9 (OCVKN)
ಯೆರೂಸಲೇಮಿನ ಮಹಿಳೆಯರು ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
ಯೆಶಾಯ 32 : 10 (OCVKN)
ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
ಯೆಶಾಯ 32 : 11 (OCVKN)
ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
ಯೆಶಾಯ 32 : 12 (OCVKN)
ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ ನಿಮ್ಮ ಎದೆ ಬಡಿದುಕೊಳ್ಳಿರಿ.
ಯೆಶಾಯ 32 : 13 (OCVKN)
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.
ಯೆಶಾಯ 32 : 14 (OCVKN)
ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.
ಯೆಶಾಯ 32 : 15 (OCVKN)
ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.
ಯೆಶಾಯ 32 : 16 (OCVKN)
ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.
ಯೆಶಾಯ 32 : 17 (OCVKN)
ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.
ಯೆಶಾಯ 32 : 18 (OCVKN)
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಯೆಶಾಯ 32 : 19 (OCVKN)
ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.
ಯೆಶಾಯ 32 : 20 (OCVKN)
ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.
❮
❯
1
2
3
4
5
6
7
8
9
10
11
12
13
14
15
16
17
18
19
20