ಯೆಶಾಯ 52 : 1 (OCVKN)
ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.
ಯೆಶಾಯ 52 : 2 (OCVKN)
ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.
ಯೆಶಾಯ 52 : 3 (OCVKN)
ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”
ಯೆಶಾಯ 52 : 4 (OCVKN)
ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವುದಕ್ಕೆ ಈಜಿಪ್ಟಿಗೆ ಹೋದರು. ಅಸ್ಸೀರಿಯದವರು ಕಾರಣವಿಲ್ಲದೆ ಅವರಿಗೆ ಬಾಧೆಪಡಿಸಿದರು.
ಯೆಶಾಯ 52 : 5 (OCVKN)
“ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ.
ಯೆಶಾಯ 52 : 6 (OCVKN)
ಆದ್ದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಅದು ನಾನೇ ಎಂದು ಅವರು ಗ್ರಹಿಸುವರು.”
ಯೆಶಾಯ 52 : 7 (OCVKN)
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!
ಯೆಶಾಯ 52 : 8 (OCVKN)
ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.
ಯೆಶಾಯ 52 : 9 (OCVKN)
ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.
ಯೆಶಾಯ 52 : 10 (OCVKN)
ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.
ಯೆಶಾಯ 52 : 11 (OCVKN)
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.
ಯೆಶಾಯ 52 : 12 (OCVKN)
ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.
ಯೆಶಾಯ 52 : 13 (OCVKN)
ಯೆಹೋವ ದೇವರ ಸೇವಕನ ಶ್ರಮೆ ಮತ್ತು ಮಹಿಮೆ ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.
ಯೆಶಾಯ 52 : 14 (OCVKN)
ಅವನ ಮುಖವು ಮನುಷ್ಯರಿಗಿಂತಲೂ, ಅವನ ಆಕಾರವು ನರಪುತ್ರರಿಗಿಂತಲೂ ಕುರೂಪವಾಗಿರುವುದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ,
ಯೆಶಾಯ 52 : 15 (OCVKN)
ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.
❮
❯
1
2
3
4
5
6
7
8
9
10
11
12
13
14
15