ಯೆಶಾಯ 8 : 1 (OCVKN)
ಯೆಶಾಯ ಮತ್ತು ಅವನ ಮಕ್ಕಳು ಸಂಕೇತಗಳಂತೆ ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.
ಯೆಶಾಯ 8 : 2 (OCVKN)
ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
ಯೆಶಾಯ 8 : 3 (OCVKN)
ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.
ಯೆಶಾಯ 8 : 4 (OCVKN)
ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.
ಯೆಶಾಯ 8 : 5 (OCVKN)
ಯೆಶಾಯ 8 : 6 (OCVKN)
ಯೆಹೋವ ದೇವರು ಮತ್ತೊಮ್ಮೆ ನನಗೆ, “ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,
ಯೆಶಾಯ 8 : 7 (OCVKN)
ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
ಯೆಶಾಯ 8 : 8 (OCVKN)
ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”
ಯೆಶಾಯ 8 : 9 (OCVKN)
ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!
ಯೆಶಾಯ 8 : 10 (OCVKN)
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.
ಯೆಶಾಯ 8 : 11 (OCVKN)
ಯೆಶಾಯ 8 : 12 (OCVKN)
ನಾನು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ಯೆಹೋವ ದೇವರು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ನನಗೆ, “ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
ಯೆಶಾಯ 8 : 13 (OCVKN)
ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.
ಯೆಶಾಯ 8 : 14 (OCVKN)
ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.
ಯೆಶಾಯ 8 : 15 (OCVKN)
ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”
ಯೆಶಾಯ 8 : 16 (OCVKN)
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.
ಯೆಶಾಯ 8 : 17 (OCVKN)
ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.
ಯೆಶಾಯ 8 : 18 (OCVKN)
ಯೆಶಾಯ 8 : 19 (OCVKN)
ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ. ಕತ್ತಲೆ ಬೆಳಕಿಗೆ ತಿರುಗುತ್ತದೆ ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?
ಯೆಶಾಯ 8 : 20 (OCVKN)
ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.
ಯೆಶಾಯ 8 : 21 (OCVKN)
ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
ಯೆಶಾಯ 8 : 22 (OCVKN)
ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.

1 2 3 4 5 6 7 8 9 10 11 12 13 14 15 16 17 18 19 20 21 22