ಯಾಕೋಬನು 3 : 1 (OCVKN)
ನಾಲಿಗೆಯನ್ನು ಬಿಗಿ ಹಿಡಿಯುವುದು ಅವಶ್ಯ ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
ಯಾಕೋಬನು 3 : 2 (OCVKN)
ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
ಯಾಕೋಬನು 3 : 3 (OCVKN)
ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ.
ಯಾಕೋಬನು 3 : 4 (OCVKN)
ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ.
ಯಾಕೋಬನು 3 : 5 (OCVKN)
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ.
ಯಾಕೋಬನು 3 : 6 (OCVKN)
ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.
ಯಾಕೋಬನು 3 : 7 (OCVKN)
ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ.
ಯಾಕೋಬನು 3 : 8 (OCVKN)
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.
ಯಾಕೋಬನು 3 : 9 (OCVKN)
ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ.
ಯಾಕೋಬನು 3 : 10 (OCVKN)
ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು.
ಯಾಕೋಬನು 3 : 11 (OCVKN)
ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ?
ಯಾಕೋಬನು 3 : 12 (OCVKN)
ನನ್ನ ಪ್ರಿಯರೇ, ಅಂಜೂರದ ಮರವು ಎಣ್ಣೇಮರದ ಕಾಯನ್ನು ಬಿಡುವುದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಉಪ್ಪುನೀರಿನ ಬುಗ್ಗೆಯು ಸಿಹಿನೀರನ್ನು ಕೊಡಲು ಎಂದಿಗೂ ಸಾಧ್ಯವಿಲ್ಲ.
ಯಾಕೋಬನು 3 : 13 (OCVKN)
ನಿಜವಾದ ಜ್ಞಾನದ ಲಕ್ಷಣಗಳು ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.
ಯಾಕೋಬನು 3 : 14 (OCVKN)
ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.
ಯಾಕೋಬನು 3 : 15 (OCVKN)
ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.
ಯಾಕೋಬನು 3 : 16 (OCVKN)
ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ.
ಯಾಕೋಬನು 3 : 17 (OCVKN)
ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.
ಯಾಕೋಬನು 3 : 18 (OCVKN)
ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.

1 2 3 4 5 6 7 8 9 10 11 12 13 14 15 16 17 18