ಯೆರೆಮಿಯ 11 : 1 (OCVKN)
ಒಡಂಬಡಿಕೆ ಮುರಿದಿದ್ದು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
ಯೆರೆಮಿಯ 11 : 2 (OCVKN)
“ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.
ಯೆರೆಮಿಯ 11 : 3 (OCVKN)
ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
ಯೆರೆಮಿಯ 11 : 4 (OCVKN)
ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.
ಯೆರೆಮಿಯ 11 : 5 (OCVKN)
ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.”
ಯೆರೆಮಿಯ 11 : 6 (OCVKN)
“ಓ ಯೆಹೋವ ದೇವರೇ, ಹಾಗೆಯೇ ಆಗಲಿ* ಅಥವಾ ಆಮೆನ್ ,” ಎಂದೆನು. ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.
ಯೆರೆಮಿಯ 11 : 7 (OCVKN)
ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.
ಯೆರೆಮಿಯ 11 : 8 (OCVKN)
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”
ಯೆರೆಮಿಯ 11 : 9 (OCVKN)
ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.
ಯೆರೆಮಿಯ 11 : 10 (OCVKN)
ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.
ಯೆರೆಮಿಯ 11 : 11 (OCVKN)
ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.
ಯೆರೆಮಿಯ 11 : 12 (OCVKN)
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.
ಯೆರೆಮಿಯ 11 : 13 (OCVKN)
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’
ಯೆರೆಮಿಯ 11 : 15 (OCVKN)
“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು. “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”
ಯೆರೆಮಿಯ 11 : 16 (OCVKN)
ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.
ಯೆರೆಮಿಯ 11 : 17 (OCVKN)
17 ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.
ಯೆರೆಮಿಯ 11 : 18 (OCVKN)
ಯೆರೆಮೀಯನ ವಿರುದ್ಧ ಒಳಸಂಚು ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.
ಯೆರೆಮಿಯ 11 : 19 (OCVKN)
ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”
ಯೆರೆಮಿಯ 11 : 20 (OCVKN)
ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.
ಯೆರೆಮಿಯ 11 : 21 (OCVKN)
ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,
ಯೆರೆಮಿಯ 11 : 22 (OCVKN)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.
ಯೆರೆಮಿಯ 11 : 23 (OCVKN)
ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23