ಯೆರೆಮಿಯ 2 : 1 (OCVKN)
ಇಸ್ರಾಯೇಲರು ಯೆಹೋವ ದೇವರನ್ನು ತೃಣೀಕರಿಸಿದ್ದು ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:
ಯೆರೆಮಿಯ 2 : 2 (OCVKN)
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.
ಯೆರೆಮಿಯ 2 : 3 (OCVKN)
ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 2 : 4 (OCVKN)
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ.
ಯೆರೆಮಿಯ 2 : 5 (OCVKN)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?
ಯೆರೆಮಿಯ 2 : 6 (OCVKN)
ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.
ಯೆರೆಮಿಯ 2 : 7 (OCVKN)
ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.
ಯೆರೆಮಿಯ 2 : 8 (OCVKN)
ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.
ಯೆರೆಮಿಯ 2 : 9 (OCVKN)
“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
ಯೆರೆಮಿಯ 2 : 10 (OCVKN)
ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. ಅಂಥದ್ದು ಉಂಟೋ ಎಂದು ನೋಡಿರಿ.
ಯೆರೆಮಿಯ 2 : 11 (OCVKN)
ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
ಯೆರೆಮಿಯ 2 : 12 (OCVKN)
ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 2 : 13 (OCVKN)
“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.
ಯೆರೆಮಿಯ 2 : 14 (OCVKN)
ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು?
ಯೆರೆಮಿಯ 2 : 15 (OCVKN)
ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
ಯೆರೆಮಿಯ 2 : 16 (OCVKN)
ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
ಯೆರೆಮಿಯ 2 : 17 (OCVKN)
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?
ಯೆರೆಮಿಯ 2 : 18 (OCVKN)
ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?
ಯೆರೆಮಿಯ 2 : 19 (OCVKN)
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 2 : 20 (OCVKN)
“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.
ಯೆರೆಮಿಯ 2 : 21 (OCVKN)
ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?
ಯೆರೆಮಿಯ 2 : 22 (OCVKN)
ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 2 : 23 (OCVKN)
“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.
ಯೆರೆಮಿಯ 2 : 24 (OCVKN)
ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು.
ಯೆರೆಮಿಯ 2 : 25 (OCVKN)
ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.
ಯೆರೆಮಿಯ 2 : 26 (OCVKN)
“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.
ಯೆರೆಮಿಯ 2 : 27 (OCVKN)
ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.
ಯೆರೆಮಿಯ 2 : 28 (OCVKN)
ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
ಯೆರೆಮಿಯ 2 : 29 (OCVKN)
“ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 2 : 30 (OCVKN)
“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಯೆರೆಮಿಯ 2 : 31 (OCVKN)
“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?
ಯೆರೆಮಿಯ 2 : 32 (OCVKN)
ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಯೆರೆಮಿಯ 2 : 33 (OCVKN)
ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
ಯೆರೆಮಿಯ 2 : 34 (OCVKN)
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.
ಯೆರೆಮಿಯ 2 : 35 (OCVKN)
ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
ಯೆರೆಮಿಯ 2 : 36 (OCVKN)
ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.
ಯೆರೆಮಿಯ 2 : 37 (OCVKN)
ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37