ಯೆರೆಮಿಯ 23 : 1 (OCVKN)
ನೀತಿಯ ಕೊಂಬೆಗಳು “ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 2 (OCVKN)
ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 3 (OCVKN)
“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.
ಯೆರೆಮಿಯ 23 : 4 (OCVKN)
ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 5 (OCVKN)
“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
ಯೆರೆಮಿಯ 23 : 6 (OCVKN)
ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.
ಯೆರೆಮಿಯ 23 : 7 (OCVKN)
7 “ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.
ಯೆರೆಮಿಯ 23 : 8 (OCVKN)
ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”
ಯೆರೆಮಿಯ 23 : 9 (OCVKN)
ಸುಳ್ಳು ಪ್ರವಾದಿಗಳು ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
ಯೆರೆಮಿಯ 23 : 10 (OCVKN)
ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.
ಯೆರೆಮಿಯ 23 : 11 (OCVKN)
“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 12 (OCVKN)
“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 13 (OCVKN)
“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.
ಯೆರೆಮಿಯ 23 : 14 (OCVKN)
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”
ಯೆರೆಮಿಯ 23 : 15 (OCVKN)
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”
ಯೆರೆಮಿಯ 23 : 16 (OCVKN)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.
ಯೆರೆಮಿಯ 23 : 17 (OCVKN)
ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.
ಯೆರೆಮಿಯ 23 : 18 (OCVKN)
ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?
ಯೆರೆಮಿಯ 23 : 19 (OCVKN)
ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು
ಯೆರೆಮಿಯ 23 : 20 (OCVKN)
ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.
ಯೆರೆಮಿಯ 23 : 21 (OCVKN)
ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.
ಯೆರೆಮಿಯ 23 : 22 (OCVKN)
ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”
ಯೆರೆಮಿಯ 23 : 23 (OCVKN)
ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?”
ಯೆರೆಮಿಯ 23 : 24 (OCVKN)
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 25 (OCVKN)
“ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
ಯೆರೆಮಿಯ 23 : 26 (OCVKN)
ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.
ಯೆರೆಮಿಯ 23 : 27 (OCVKN)
ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.
ಯೆರೆಮಿಯ 23 : 28 (OCVKN)
ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 29 (OCVKN)
“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.
ಯೆರೆಮಿಯ 23 : 30 (OCVKN)
ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 23 : 31 (OCVKN)
“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.
ಯೆರೆಮಿಯ 23 : 32 (OCVKN)
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.
ಯೆರೆಮಿಯ 23 : 33 (OCVKN)
ಸುಳ್ಳು ಪ್ರವಾದನೆಗಳು “ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’
ಯೆರೆಮಿಯ 23 : 34 (OCVKN)
ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.
ಯೆರೆಮಿಯ 23 : 35 (OCVKN)
‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,
ಯೆರೆಮಿಯ 23 : 36 (OCVKN)
‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.
ಯೆರೆಮಿಯ 23 : 37 (OCVKN)
‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.
ಯೆರೆಮಿಯ 23 : 38 (OCVKN)
‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.
ಯೆರೆಮಿಯ 23 : 39 (OCVKN)
ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.
ಯೆರೆಮಿಯ 23 : 40 (OCVKN)
ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40