ಯೆರೆಮಿಯ 33 : 1 (OCVKN)
ಪುನಃಸ್ಥಾಪನೆಯ ವಾಗ್ದಾನ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.
ಯೆರೆಮಿಯ 33 : 2 (OCVKN)
“ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,
ಯೆರೆಮಿಯ 33 : 3 (OCVKN)
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
ಯೆರೆಮಿಯ 33 : 4 (OCVKN)
ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.
ಯೆರೆಮಿಯ 33 : 5 (OCVKN)
ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
ಯೆರೆಮಿಯ 33 : 6 (OCVKN)
“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
ಯೆರೆಮಿಯ 33 : 7 (OCVKN)
ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.
ಯೆರೆಮಿಯ 33 : 8 (OCVKN)
ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.
ಯೆರೆಮಿಯ 33 : 9 (OCVKN)
ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’
ಯೆರೆಮಿಯ 33 : 10 (OCVKN)
“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ
ಯೆರೆಮಿಯ 33 : 11 (OCVKN)
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 33 : 12 (OCVKN)
“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.
ಯೆರೆಮಿಯ 33 : 13 (OCVKN)
ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 33 : 14 (OCVKN)
ಯೆರೆಮಿಯ 33 : 15 (OCVKN)
“ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು. “ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
ಯೆರೆಮಿಯ 33 : 16 (OCVKN)
ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’
ಯೆರೆಮಿಯ 33 : 17 (OCVKN)
17 ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ
ಯೆರೆಮಿಯ 33 : 18 (OCVKN)
ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”
ಯೆರೆಮಿಯ 33 : 19 (OCVKN)
ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:
ಯೆರೆಮಿಯ 33 : 20 (OCVKN)
“ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?
ಯೆರೆಮಿಯ 33 : 21 (OCVKN)
ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.
ಯೆರೆಮಿಯ 33 : 22 (OCVKN)
ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”
ಯೆರೆಮಿಯ 33 : 23 (OCVKN)
ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:
ಯೆರೆಮಿಯ 33 : 24 (OCVKN)
“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?
ಯೆರೆಮಿಯ 33 : 25 (OCVKN)
ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,
ಯೆರೆಮಿಯ 33 : 26 (OCVKN)
ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26