ಯೆರೆಮಿಯ 4 : 1 (OCVKN)
“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.
ಯೆರೆಮಿಯ 4 : 2 (OCVKN)
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”
ಯೆರೆಮಿಯ 4 : 3 (OCVKN)
ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
ಯೆರೆಮಿಯ 4 : 4 (OCVKN)
ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”
ಯೆರೆಮಿಯ 4 : 5 (OCVKN)
ಉತ್ತರ ದಿಕ್ಕಿನಿಂದ ಬರುವ ಆಪತ್ತು “ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.
ಯೆರೆಮಿಯ 4 : 6 (OCVKN)
ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”
ಯೆರೆಮಿಯ 4 : 7 (OCVKN)
ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.
ಯೆರೆಮಿಯ 4 : 8 (OCVKN)
ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.
ಯೆರೆಮಿಯ 4 : 9 (OCVKN)
ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.
ಯೆರೆಮಿಯ 4 : 10 (OCVKN)
ಯೆರೆಮಿಯ 4 : 11 (OCVKN)
ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು. ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.
ಯೆರೆಮಿಯ 4 : 12 (OCVKN)
ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”
ಯೆರೆಮಿಯ 4 : 13 (OCVKN)
ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.
ಯೆರೆಮಿಯ 4 : 14 (OCVKN)
ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.
ಯೆರೆಮಿಯ 4 : 15 (OCVKN)
ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
ಯೆರೆಮಿಯ 4 : 16 (OCVKN)
“ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.
ಯೆರೆಮಿಯ 4 : 17 (OCVKN)
ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 4 : 18 (OCVKN)
“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”
ಯೆರೆಮಿಯ 4 : 19 (OCVKN)
ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.
ಯೆರೆಮಿಯ 4 : 20 (OCVKN)
ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
ಯೆರೆಮಿಯ 4 : 21 (OCVKN)
ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ?
ಯೆರೆಮಿಯ 4 : 22 (OCVKN)
“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”
ಯೆರೆಮಿಯ 4 : 23 (OCVKN)
ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
ಯೆರೆಮಿಯ 4 : 24 (OCVKN)
ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹಗುರವಾಗಿ ಅದುರಿದವು.
ಯೆರೆಮಿಯ 4 : 25 (OCVKN)
ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿ ಹೋಗಿದ್ದವು.
ಯೆರೆಮಿಯ 4 : 26 (OCVKN)
ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು.
ಯೆರೆಮಿಯ 4 : 27 (OCVKN)
ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.
ಯೆರೆಮಿಯ 4 : 28 (OCVKN)
ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”
ಯೆರೆಮಿಯ 4 : 29 (OCVKN)
ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವುದು. ಪೊದೆಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು. ಪಟ್ಟಣಗಳೆಲ್ಲಾ ನಾಶವಾಗುವುವು. ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
ಯೆರೆಮಿಯ 4 : 30 (OCVKN)
ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.
ಯೆರೆಮಿಯ 4 : 31 (OCVKN)
ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31