ಯೆರೆಮಿಯ 5 : 1 (OCVKN)
ಒಬ್ಬನೂ ನೀತಿವಂತನು ಇಲ್ಲ “ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
ಯೆರೆಮಿಯ 5 : 2 (OCVKN)
ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”
ಯೆರೆಮಿಯ 5 : 3 (OCVKN)
ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.
ಯೆರೆಮಿಯ 5 : 4 (OCVKN)
ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು.
ಯೆರೆಮಿಯ 5 : 5 (OCVKN)
ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.
ಯೆರೆಮಿಯ 5 : 6 (OCVKN)
ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.
ಯೆರೆಮಿಯ 5 : 7 (OCVKN)
ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.
ಯೆರೆಮಿಯ 5 : 8 (OCVKN)
ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ. ತಮ್ಮ ತಮ್ಮ ನೆರೆಯವರ ಹೆಂಡತಿಯರನ್ನು ಕಂಡು ಹೇಕರಿಸುತ್ತಾರೆ.
ಯೆರೆಮಿಯ 5 : 9 (OCVKN)
ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 5 : 10 (OCVKN)
ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.
ಯೆರೆಮಿಯ 5 : 11 (OCVKN)
ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 5 : 12 (OCVKN)
ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,
ಯೆರೆಮಿಯ 5 : 13 (OCVKN)
ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು, ದೈವೋಕ್ತಿ ಎಂಬುದು ಅವುಗಳಲ್ಲಿ ಇಲ್ಲ, ಅವರು ಹೇಳುವುದೆಲ್ಲಾ ಅವರಿಗೇ ತಗಲಲಿ,” ಎಂದುಕೊಂಡಿದ್ದಾರೆ.
ಯೆರೆಮಿಯ 5 : 14 (OCVKN)
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”
ಯೆರೆಮಿಯ 5 : 15 (OCVKN)
ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
ಯೆರೆಮಿಯ 5 : 16 (OCVKN)
ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ.
ಯೆರೆಮಿಯ 5 : 17 (OCVKN)
ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
ಯೆರೆಮಿಯ 5 : 18 (OCVKN)
“ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.
ಯೆರೆಮಿಯ 5 : 19 (OCVKN)
“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’
ಯೆರೆಮಿಯ 5 : 20 (OCVKN)
“ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ.
ಯೆರೆಮಿಯ 5 : 21 (OCVKN)
ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
ಯೆರೆಮಿಯ 5 : 22 (OCVKN)
ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.
ಯೆರೆಮಿಯ 5 : 23 (OCVKN)
ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.
ಯೆರೆಮಿಯ 5 : 24 (OCVKN)
ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.
ಯೆರೆಮಿಯ 5 : 25 (OCVKN)
ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.
ಯೆರೆಮಿಯ 5 : 26 (OCVKN)
“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.
ಯೆರೆಮಿಯ 5 : 27 (OCVKN)
ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ.
ಯೆರೆಮಿಯ 5 : 28 (OCVKN)
ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.
ಯೆರೆಮಿಯ 5 : 29 (OCVKN)
ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?
ಯೆರೆಮಿಯ 5 : 30 (OCVKN)
“ಭಯಂಕರವಾದ ಮತ್ತು ಆಶ್ಚರ್ಯವಾದ ಕಾರ್ಯವು ದೇಶದಲ್ಲಿ ನಡೆಯುತ್ತದೆ.
ಯೆರೆಮಿಯ 5 : 31 (OCVKN)
ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31