ಯೆರೆಮಿಯ 7 : 1 (OCVKN)
ಸುಳ್ಳು ಆರಾಧನೆ ನಿಷ್ಪ್ರಯೋಜಕ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ:
ಯೆರೆಮಿಯ 7 : 2 (OCVKN)
“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
ಯೆರೆಮಿಯ 7 : 3 (OCVKN)
ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
ಯೆರೆಮಿಯ 7 : 4 (OCVKN)
“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
ಯೆರೆಮಿಯ 7 : 5 (OCVKN)
ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;
ಯೆರೆಮಿಯ 7 : 6 (OCVKN)
ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;
ಯೆರೆಮಿಯ 7 : 7 (OCVKN)
ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
ಯೆರೆಮಿಯ 7 : 8 (OCVKN)
ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
ಯೆರೆಮಿಯ 7 : 9 (OCVKN)
“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,
ಯೆರೆಮಿಯ 7 : 10 (OCVKN)
ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?
ಯೆರೆಮಿಯ 7 : 11 (OCVKN)
ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.
ಯೆರೆಮಿಯ 7 : 12 (OCVKN)
“ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
ಯೆರೆಮಿಯ 7 : 13 (OCVKN)
ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.
ಯೆರೆಮಿಯ 7 : 14 (OCVKN)
ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.
ಯೆರೆಮಿಯ 7 : 15 (OCVKN)
ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’
ಯೆರೆಮಿಯ 7 : 16 (OCVKN)
“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.
ಯೆರೆಮಿಯ 7 : 17 (OCVKN)
ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ?
ಯೆರೆಮಿಯ 7 : 18 (OCVKN)
‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”
ಯೆರೆಮಿಯ 7 : 19 (OCVKN)
ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”
ಯೆರೆಮಿಯ 7 : 21 (OCVKN)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ. “ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.
ಯೆರೆಮಿಯ 7 : 22 (OCVKN)
ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
ಯೆರೆಮಿಯ 7 : 23 (OCVKN)
ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.
ಯೆರೆಮಿಯ 7 : 24 (OCVKN)
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
ಯೆರೆಮಿಯ 7 : 25 (OCVKN)
ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು.
ಯೆರೆಮಿಯ 7 : 26 (OCVKN)
ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’
ಯೆರೆಮಿಯ 7 : 27 (OCVKN)
“ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ.
ಯೆರೆಮಿಯ 7 : 28 (OCVKN)
ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.
ಯೆರೆಮಿಯ 7 : 30 (OCVKN)
“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ. ಸಂಹಾರದ ತಗ್ಗು “ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.
ಯೆರೆಮಿಯ 7 : 31 (OCVKN)
ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
ಯೆರೆಮಿಯ 7 : 32 (OCVKN)
ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.
ಯೆರೆಮಿಯ 7 : 33 (OCVKN)
ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.
ಯೆರೆಮಿಯ 7 : 34 (OCVKN)
ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34