ಯೋವೇಲ 1 : 1 (OCVKN)
ಪೆತುಯೇಲನ ಮಗನಾದ ಯೋಯೇಲನಿಗೆ ಬಂದ ಯೆಹೋವ ದೇವರು ವಾಕ್ಯವು:
ಯೋವೇಲ 1 : 2 (OCVKN)
ಮಿಡತೆಗಳಿಂದಾದ ಹಾನಿ ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?
ಯೋವೇಲ 1 : 3 (OCVKN)
ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ, ಅವರ ಮಕ್ಕಳೂ ಮತ್ತೊಂದು ತಲಾಂತರಕ್ಕೂ ತಿಳಿಸಲಿ.
ಯೋವೇಲ 1 : 4 (OCVKN)
ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.
ಯೋವೇಲ 1 : 5 (OCVKN)
ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.
ಯೋವೇಲ 1 : 6 (OCVKN)
ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು. ಅದು ಬಲವಾದದ್ದೂ, ಲೆಕ್ಕವಿಲ್ಲದ್ದೂ; ಅದರ ಕೋರೆಗಳು ಸಿಂಹದ ಹಲ್ಲುಗಳು, ಸಿಂಹಿಣಿಯ ಹಲ್ಲುಗಳು ಅದಕ್ಕೆ ಇವೆ.
ಯೋವೇಲ 1 : 7 (OCVKN)
ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.
ಯೋವೇಲ 1 : 8 (OCVKN)
ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.
ಯೋವೇಲ 1 : 9 (OCVKN)
ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.
ಯೋವೇಲ 1 : 10 (OCVKN)
ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.
ಯೋವೇಲ 1 : 11 (OCVKN)
ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.
ಯೋವೇಲ 1 : 12 (OCVKN)
ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.
ಯೋವೇಲ 1 : 13 (OCVKN)
ಪ್ರಲಾಪಕ್ಕೆ ಕರೆ ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.
ಯೋವೇಲ 1 : 14 (OCVKN)
ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.
ಯೋವೇಲ 1 : 15 (OCVKN)
ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.
ಯೋವೇಲ 1 : 16 (OCVKN)
ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?
ಯೋವೇಲ 1 : 17 (OCVKN)
ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ.
ಯೋವೇಲ 1 : 18 (OCVKN)
ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.
ಯೋವೇಲ 1 : 19 (OCVKN)
ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.
ಯೋವೇಲ 1 : 20 (OCVKN)
ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.

1 2 3 4 5 6 7 8 9 10 11 12 13 14 15 16 17 18 19 20