ಯೋವೇಲ 3 : 1 (OCVKN)
ಜನಾಂಗಗಳ ನ್ಯಾಯತೀರ್ಪು “ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,
ಯೋವೇಲ 3 : 2 (OCVKN)
ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ* ಯೆಹೋಷಾಫಾಟ ಇದರ ಅರ್ಥ ಯೆಹೋವ ದೇವರು ನ್ಯಾಯತೀರ್ಪು ಮಾಡುತ್ತಾರೆ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.
ಯೋವೇಲ 3 : 3 (OCVKN)
ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.
ಯೋವೇಲ 3 : 4 (OCVKN)
“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಯೋವೇಲ 3 : 5 (OCVKN)
ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.
ಯೋವೇಲ 3 : 6 (OCVKN)
ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.
ಯೋವೇಲ 3 : 7 (OCVKN)
“ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.
ಯೋವೇಲ 3 : 8 (OCVKN)
ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.
ಯೋವೇಲ 3 : 9 (OCVKN)
ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧಕ್ಕೆ ಇದನ್ನು ಸಿದ್ಧಮಾಡಿರಿ; ಶೂರರನ್ನು ಎಬ್ಬಿಸಿರಿ; ಯುದ್ಧಭಟರೆಲ್ಲರು ಸಮೀಪಿಸಿ ಬರಲಿ.
ಯೋವೇಲ 3 : 10 (OCVKN)
ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳನ್ನಾಗಿಯೂ ಬಡಿಯಿರಿ ಬಲಹೀನನು ಸಹ ನಾನು ಶಕ್ತಿವಂತನು ಎಂದು ಹೇಳಲಿ.
ಯೋವೇಲ 3 : 11 (OCVKN)
ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ.
ಯೋವೇಲ 3 : 12 (OCVKN)
ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.
ಯೋವೇಲ 3 : 13 (OCVKN)
ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.
ಯೋವೇಲ 3 : 14 (OCVKN)
ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.
ಯೋವೇಲ 3 : 15 (OCVKN)
ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.
ಯೋವೇಲ 3 : 16 (OCVKN)
ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.
ಯೋವೇಲ 3 : 17 (OCVKN)
ದೇವರ ಜನರಿಗೆ ಆಶೀರ್ವಾದಗಳು ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.
ಯೋವೇಲ 3 : 18 (OCVKN)
ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ† ಶಿಟ್ಟೀಮಿನ ಅಥವಾ ಅಕೇಶಿಯಾ ಕಣಿವೆಗೆ ಜಲ ಕೊಡುವುದು.
ಯೋವೇಲ 3 : 19 (OCVKN)
ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.
ಯೋವೇಲ 3 : 20 (OCVKN)
ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.
ಯೋವೇಲ 3 : 21 (OCVKN)
ನಾನು ಅವರ ಮುಗ್ಧ ರಕ್ತಕ್ಕೆ ಪ್ರತೀಕಾರ ತೀರಿಸದೆ ಬಿಡಬೇಕೇ? ಇಲ್ಲ, ನಾನು ಎಂದಿಗೂ ಬಿಡುವುದಿಲ್ಲ. ಯೆಹೋವ ದೇವರು ಚೀಯೋನಿನಲ್ಲಿ ವಾಸವಾಗಿರುತ್ತಾರೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21